ಸಿದ್ದರಾಮಯ್ಯಗೆ ಗೌಡರ ಗುದ್ದು - ರಾಹುಲ್ ಗೆ ದೂರು


11-06-2019 194

ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಲಹ ತೀವ್ರಗೊಂಡಿದೆ. ಸುಗಮ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಡ್ಡಿಯಾಗಿದ್ದಾರೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ದೂರು ನೀಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಬಗ್ಗೆಯೂ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಹಿಂದೆ ರಾಹುಲ್‍ಗೆ ಬರೆದಿದ್ದ ಪತ್ರವನ್ನು ನೆನಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ದೇವೇಗೌಡರು,‌ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸರಕಾರದ ಕಾರ್ಯವೈಖರಿ ಹಾಗೂ ಸಿದ್ದರಾಮಯ್ಯ ಮತ್ತವರ ಬೆಂಬಲಿಗರಿಂದ ಪದೇ ಪದೇ ಮುಜುಗರ ಉಂಟಾಗುತ್ತಿದೆ ಎಂದು ವಿವರಿಸಿದರು ಎಂದು ಗೊತ್ತಾಗಿದೆ

ಸಂಪುಟ ಪುನರ್ ರಚನೆಗೆ ಸಿದ್ದರಾಮಯ್ಯ ಕಿರಿಕ್ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಪರಿಸ್ಥಿತಿ ನಿಯಂತ್ರಿಸದಿದ್ದರೆ ಮೈತ್ರಿ ಅಂತ್ಯ ಆಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅಪಾಯ ತಂದೊಡ್ಡುವ ಮಿತ್ರಪಕ್ಷಗಳ ‘ಹಿತಶತ್ರು’ಗಳನ್ನು ನಿವಾರಿಸಿಕೊಳ್ಳಿ ಎಂದು ದೇವೇಗೌಡರು ರಾಹುಲ್ ಗಾಂಧಿ ಹಾಗೂ ಅಹ್ಮದ್ ಪಟೇಲ್‍ಗೆ ದೂರು ಕೊಟ್ಟಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

H D Devegowda JDS Rahul Gandhi Congress