ವಿಶ್ವನಾಥ್ ಪಕ್ಷ ತೊರೆಯುವುದಿಲ್ಲ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ


20-06-2019 133

ಬೆಂಗಳೂರು: ನಮ್ಮ ಪಕ್ಷದ (ಜೆಡಿಎಸ್) ಅಧ್ಯಕ್ಷ ಎಚ್ ವಿಶ್ವನಾಥ್ ಅವರು ಪಕ್ಷವನ್ನು ತೊರೆಯುವುದಿಲ್ಲ ಎಂದು ಹೇಳಿದ್ದಾರೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದರು. ಅಲ್ಲದೇ, ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವುದಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ. ನಾನು ನಾಳೆ ನಮ್ಮ ಪಕ್ಷದ ನಾಯಕರ ಸಭೆ ಕರೆದಿದ್ದೇನೆ. ನಾವು ವಿಶ್ವನಾಥ್ ಅವರ ಮನ ಒಲಿಸಲು ಯತ್ನಿಸುತ್ತೇವೆ ಎಂದರು. ಜೊತೆಗೆ, ನಾಳಿನ ಸಭೆಯಲ್ಲಿ ಮೈತ್ರಿ ಸರ್ಕಾರ ಅಥವಾ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವುದಿಲ್ಲ ಎಂದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

H Vishwanath H D Devegowda JDS state politics