ಜೂ. 12 ರ ಕರ್ನಾಟಕ ಬಂದ್‍ ಗೆ ಬೆಂಬಲ ಕೋರಿ ಮೆರವಣಿಗೆ !


09-06-2017 276

ಬೆಂಗಳೂರು:- ಬಯಲುಸೀಮೆಯ ಚಿಕ್ಕಬಳ್ಳಾಪುರ, ಕೋಲಾರ ಪ್ರದೇಶಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸುವುದು, ರೈತರ ಸಾಲ ಮನ್ನಾಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಬೆಂಬಲ ಕೋರಿ ಕನ್ನಡ ಒಕ್ಕೂಟದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದರು. ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಮೈಸೂರ್ ಬ್ಯಾಂಕ್ ವೃತ್ತದಿಂದ ಹೊರಟ ಕಾರ್ಯಕರ್ತರು ಮಾಲ್ ಗಳು, ರಸ್ತೆಗಳು, ಬಸ್ ನಿಲ್ದಾಣಗಳು, ವಾಣಿಜ್ಯ ಚಟುವಟಿಕೆ ಕೇಂದ್ರಗಳ ಬಳಿ ಮೆರವಣಿಗೆ ನಡೆಸಿ ಜೂ. 12 ರಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಬೆಂಬಲ ಕೋರಿದರು. ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧಿಸುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕೇರಳದಲ್ಲಿ ಕನ್ನಡಿಗರ ಮೇಲೆ ಮಲೆಯಾಳಂ ಭಾಷೆ ಕಡ್ಡಾಯಗೊಳಿಸುವುದನ್ನು ತೀವ್ರವಾಗಿ ವಿರೋಧಿಸಿ ಮಹಾದಾಯಿ ಕಳಸಾ-ಬಂಡೂರಿ ಯೋಜನೆಗೆ ಪ್ರಧಾನಿಗೆ ಮಧ್ಯಪ್ರವೇಶಕ್ಕೆ ಆಗ್ರಹಿಸಿದರು. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡರನ್ನು ಗಡಿಪಾರು ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಮೆರವಣಿಗೆಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಕನ್ನಡ ಸೇನೆಯ ಕೆ.ಆರ್. ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.


ಒಂದು ಕಮೆಂಟನ್ನು ಬಿಡಿ