ಜಾರಕಿಹೊಳಿ ಸೇರಿ 8 ಮಂದಿ ಶಾಸಕರ ರಾಜೀನಾಮೆ


06-07-2019 247

ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರಕ್ಕೆ ಕಂಟಕ ಎದುರಾಗಿದೆ. ರಮೇಶ್ ಜಾರಕಿಹೊಳಿ ಸೇರಿದಂತೆ 8 ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮತ್ತಷ್ಟು ಶಾಸಕರು ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ರಮೇಶ್ ಜಾರಕಿಹೊಳಿ ಅಧಿಕೃತವಾಗಿ ವಿಧಾನಸೌಧಕ್ಕೆ ಆಗಮಿಸಿದ್ದು, ಅಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅನುಪಸ್ಥಿತಿ ಹಿನ್ನೆಲೆಯಲ್ಲಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರೊಂದಿಗೆ ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಮಹೇಶ್ ಕಮಟಳ್ಳಿ, ಮುನಿರತ್ನ, ಜೆಡಿಎಸ್ ನ ಹೆಚ್ ವಿಶ್ವನಾಥ್, ಗೋಪಾಲಯ್ಯ, ನಾರಾಯಣಗೌಡ ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಅಮೆರಿಕದಿಂದ ಮರಳುವ ಮೊದಲೇ ಸರ್ಕಾರವನ್ನು ಬೀಳಿಸಲು ಅತೃಪ್ತರು ಮುಂದಾಗಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Karnataka Government Resignation Ramesh Jarakiholi Congress