ಕುಮಾರಸ್ವಾಮಿ ತಕ್ಷಣ ರಾಜೀನಾಮೆ ನೀಡಲಿ: ಶೋಭಾ ಕರಂದ್ಲಾಜೆ


08-07-2019 179

ಬೆಂಗಳೂರು: ಕರ್ನಾಟಕದ ಸಿಎಂ ಎಚ್ ಡಿ ಕುಮಾರಸ್ವಾಮಿಯವರು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರು ಹೊಸ ಸರ್ಕಾರಕ್ಕೆ ಹಾದಿಯನ್ನು ಮಾಡಿಕೊಡಬೇಕು ಎಂದು ಅವರು ಹೇಳಿದರು.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಮನೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷೇತರ ಶಾಸಕ ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದನ್ನು ನಾವು ಸ್ವಾಗತಿಸುತ್ತೇವೆ. ನಾವು ಪಕ್ಷಕ್ಕೆ ಬರುವವರನ್ನು ಸ್ವಾಗತಿಸುತ್ತೇವೆ. ಆದರೆ, ಕಾಂಗ್ರೆಸ್, ಜೆಡಿಎಸ್‍ನ ಯಾವುದೇ ಶಾಸಕರೊಂದಿಗೆ ನಾವು ಸಂಪರ್ಕದಲ್ಲಿಲ್ಲ ಎಂದರು.

 

 

 


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Shobha Karandlaje BJP Congress MLA