ಸುಪ್ರೀಂ ಮೊರೆ ಹೋದ ಅತೃಪ್ತ ಶಾಸಕರು


10-07-2019 214

ಬೆಂಗಳೂರು: ಮೈತ್ರಿ ಸರಕಾರದ ವಿರುದ್ಧ ಅಸಮಾಧಾನಗೊಂಡು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಶಾಸಕರು ಇದೀಗ ತಮ್ಮ ರಾಜಿನಾಮೆ ಪತ್ರಗಳನ್ನು ಅಂಗೀಕಾರ ಮಾಡಲು ಸಭಾಧ್ಯಕ್ಷರಿಗೆ ಸೂಚನೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

ಹಿರಿಯ ವಕೀಲ ಮುಕುಲ್ ರೊಹ್ಟಗಿ ಅತೃಪ್ತ ಶಾಸಕರ ಪರ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದಾರೆ. ಇದರಿಂದಾಗಿ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಬಂದಿದೆ. ಈ ನಡುವೆ ಮುಂಬೈ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ. ಸೋಮಶೇಖರ್,ರಾಜಕಾರಣದ ವಿಷಯದಲ್ಲಿ ಸದ್ಯಕ್ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ಇಷ್ಟು ಉನ್ನತ ಸ್ಥಾನಕ್ಕೆ ನಮ್ಮನ್ನು ಶಿವಕುಮಾರ್ ಅವರೇ ಕರೆತಂದಿದ್ದು, ರಾಜಕಾರಣದಲ್ಲಿ ಏನೆಲ್ಲ ಸಹಾಯ ಮಾಡಬೇಕೋ ಅವರು ಮಾಡಿದ್ದಾರೆ. ಆ ದೃಷ್ಟಿಯಿಂದ ಶಿವಕುಮಾರ್ ಸೇರಿದಂತೆ ಯಾರನ್ನೂ ಭೇಟಿ ಮಾಡಲ್ಲ ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದೇವೆ. ಹೀಗಾಗಿ ನಾವು ಮಾತುಕತೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜಕಾರಣದಲ್ಲಿ ಸರಿನೋ, ತಪ್ಪೋ ಒಂದು ಹೆಜ್ಜೆಯನ್ನು ಮುಂದೆ ಇಟ್ಟಿದ್ದೇವೆ. ನಾವು ರಾಜಕೀಯ ದೃಷ್ಟಿಯಿಂದ ಯಾರನ್ನೂ ಭೇಟಿಯಾಗುವುದಿಲ್ಲ. ಹೀಗಾಗಿ ಯಾರೂ ಬರುವುದು ಬೇಡ ಎಂದು ಮಂಗಳವಾರವೇ ಮಾಧ್ಯಮಗಳಿಗೆ ಹೇಳಿದ್ದೇವೆ ಎಂದು ತಿಳಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Resort JDS MLA Supreme Court