ಇಂದೇ ಬಿಎಸ್ ವೈ ಪ್ರಮಾಣವಚನ..!


26-07-2019 186

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದು ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ತೀರ್ಮಾನಿಸಿದರು.

ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಪ್ರಮಾಣವಚನವನ್ನು ಸ್ವೀಕಾರ ಮಾಡಲು ನಿರ್ಧರಸಿದ ಅವರು ಇದಕ್ಕಾಗಿ ಅನುಮತಿ ಕೋರಲು ರಾಜಭವನಕ್ಕೆ ತೆರಳಿದರು.

ಈ ಬಗ್ಗೆ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರೊಂದಿಗೆ , ಈಗಾಗಲೇ ನಾನು ವಿರೋಧ ಪಕ್ಷದ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗದ ಸಭೆ ಅಗತ್ಯವಿಲ್ಲ. ಹೀಗಾಗಿ ನಾನು ಇಂದು ರಾಜ್ಯಪಾಲರನ್ನು ಭೇಟಿಯಾಗುತ್ತಿದ್ದೇನೆ ಎಂದರು.

ಅಷ್ಟೇ ಅಲ್ಲದೇ ಇವತ್ತೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲು ಅವಕಾಶ ಮಾಡಿಕೊಡಿ ಎಂದು ರಾಜ್ಯಪಾಲ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು. ರಾಜ್ಯಪಾಲರು ಪ್ರಮಾಣ ವಚನ ಸ್ವೀಕಾರ ಮಾಡಲು ಒಪ್ಪಿಗೆ ಸೂಚಿದರೆ ಇಂದೇ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

BS Yediyurappa Oath BJP Karnataka CM