ಮತ್ತೆ ಲೋಕಾಯುಕ್ತಕ್ಕೆ ಬಲ..! ರದ್ದಾಗುತ್ತಾ ಎಸಿಬಿ?


30-07-2019 182

ಬೆಂಗಳೂರು: ವಿಧಾನಸಭೆಯಲ್ಲಿ ಬಹುಮತ ಸಾಬೀತಾಗಿ ಆತ್ಮ ವಿಶ್ವಾಸದಿಂದ ಬೀಗುತ್ತಿರುವ ಯಡಿಯೂರಪ್ಪ ಭ್ರಷ್ಟಾಚಾರ ನಿಗ್ರಹದಳ(ಎಸಿಬಿ)ವನ್ನು ರದ್ದುಪಡಿಸಿ, ಲೋಕಾಯುಕ್ತಕ್ಕೆ ಇನ್ನಷ್ಟು ಶಕ್ತಿ ತುಂಬಲು ತೀರ್ಮಾನಿಸಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸಿಎಂ ನಿರಾಳರಾಗಿದ್ದಾರೆ. ಇನ್ನು ಆರು ತಿಂಗಳ ಕಾಲ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಹೀಗಾಗಿ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಎಸಿಬಿಯನ್ನು ರದ್ದುಪಡಿಸಿ ಲೋಕಾಯುಕ್ತ ಸಂಸ್ಥೆಯನ್ನು ಹಿಂದಿನಂತೆ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ಕೆಲವು ಕ್ರಮಗಳನ್ನು ಯಡಿಯೂರಪ್ಪ ಕೈಗೊಳ್ಳಲಿದ್ದಾರೆ.

ಚುನಾವಣಾ ಪ್ರಣಾಳಿಕೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಸಿಬಿಯನ್ನು ರದ್ದುಪಡಿಸುವುದಾಗಿ ಬಿಜೆಪಿ ತಿಳಿಸಿತ್ತು. ಇದಲ್ಲದೆ ಎಸಿಬಿ ಮುಖ್ಯಮಂತ್ರಿಗಳ ಮೂಗಿನಡಿ ಕೆಲಸ ನಿರ್ವಹಿಸುತ್ತಿದ್ದರಿಂದ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.

ಈಗ ಎಸಿಬಿಯನ್ನು ಕಿತ್ತು ಹಾಕಿ ಈ ಹಿಂದೆ ಲೋಕಾಯುಕ್ತ ಸಂಸ್ಥೆ ಯಾವ ರೀತಿ ಕೆಲಸ ನಿರ್ವಹಿಸುತ್ತಿತ್ತೋ ಅದೇ ರೀತಿ ಮುಂದುವರೆಸಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

ACB BJP Lokayuktha BS Yediyurappa