ರಾಜ್ಯಪಾಲರೇ ಎಲ್ಲಿದ್ದೀರಾ..?: ಸಿದ್ದರಾಮಯ್ಯ


03-08-2019 141

ಬೆಂಗಳೂರು: ರಾಜ್ಯದ ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಸರ್ಕಾರಕ್ಕೆ ಆದ್ಯತೆಗಳೇ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿ ಸರಣಿ ಟ್ವೀಟ್ ಗಳನ್ನು ಮಾಡಿದ್ದಾರೆ. ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ನಿಮಗೆ ಕಾಣುತ್ತಿಲ್ಲವೇ ಎಂದು ಕಿಡಿಕಾರಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ಯಾಕೆ ತೋರುತ್ತಿಲ್ಲ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆದರೆ ಆಡಳಿತ ಯಂತ್ರ ಮಾತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ ಎಂದು ಟ್ವೀಟ್ ಮೂಲಕ ಯಡಿಯೂರಪ್ಪ ಅವರನ್ನು ಪ್ರಶ್ನಿಸಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

Siddaramaiah Vajubhai Vala Congress BS Yediyurappa