ವರಮಹಾಲಕ್ಷ್ಮೀ ಹಬ್ಬಕ್ಕೆ ಭರ್ಜರಿ ಶಾಪಿಂಗ್


08-08-2019 161

ನಾಳೆ ವರಮಹಾಲಕ್ಷ್ಮೀ ಹಬ್ಬ. ನಾಡಿನಾದ್ಯಂತ ಮಹಾಲಕ್ಷ್ಮೀ ಪೂಜೆಗಾಗಿ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅದರಲ್ಲೂ ಮಹಾನಗರದಲ್ಲಿ ಹಬ್ಬಕ್ಕಾಗಿ ಭರ್ಜರಿ ಶಾಪಿಂಗ್ ನಡೆಯುತ್ತಿದೆ. ಅದರಲ್ಲೂ ಪ್ರಮುಖವಾಗಿ ಕೆ.ಆರ್.ಮಾರ್ಕೆಟ್, ಗಾಂಧಿ ಬಜಾರ್, ಮಲ್ಲೇಶ್ವರಂ, ಮೆಜೆಸ್ಟಿಕ್ ಸುತ್ತಮುತ್ತ ಜನರು ಹಬ್ಬಕ್ಕಾಗಿ ಸಾಮಗ್ರಿಗಳನ್ನು ಕೊಳ್ಳುತ್ತಿದ್ದಾರೆ. ನಾಡಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಆದರೆ ಈ ಮಳೆ ಹಬ್ಬದ ಸಂಭ್ರಮಕ್ಕೇನೂ ಅಡ್ಡಿಯಾಗಿಲ್ಲ. ಕೆ.ಆರ್ ಮಾರ್ಕೆಟ್ ನಲ್ಲಿ ಜನರು ಹೂವು ಹಣ್ಣು, ಹಬ್ಬದ ಸಾಮಗ್ರಿಗಳನ್ನು ಕೊಳ್ಳುವುದರಲ್ಲಿ ನಿರತರಾಗಿದ್ದಾರೆ. ಎಲ್ಲಿ ನೋಡಿದರೂ ಜನಜಂಗುಳಿ. ಹಬ್ಬದ ಹಿನ್ನೆಲೆಯಲ್ಲಿ ಹೂವು ಹಣ್ಣುಗಳ ಬೆಲೆ ಏರಿಕೆಯಾಗಿದ್ದರೂ ಅದ್ಯಾವುದನ್ನೂ ಲೆಕ್ಕಿಸದೇ ಹಬ್ಬದ ತಯಾರಿಯಲ್ಲಿ ಜನರ ನಿರತರಾಗಿದ್ದಾರೆ.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

K R Market Bengaluru Shopping Varamahalakshmi