ರೈತರ ಮೇಲಿನ ಮೊಕದ್ದಮೆಗಳು ವಾಪಸ್


26-08-2019 127

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ರೈತರ ಮೇಲೆ ದಾಖಲಾಗಿರುವ ಹಲವು ಮೊಕದ್ದಮೆಗಳನ್ನು ತಕ್ಷಣವೇ ಹಿಂಪಡೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಗೃಹ ಇಲಾಖೆಗೆ ಸೂಚನೆ ಕೊಟ್ಟಿದ್ದಾರೆ. ರೈತ ಹೋರಾಟದಲ್ಲಿ ದಾಖಲಾಗಿರುವ ಮೊಕದ್ದಮೆಗಳ ಸಂಪೂರ್ಣ ಮಾಹಿತಿ ಪಡೆದು ತಕ್ಷಣವೇ ವಾಪಸ್ ಪಡೆಯುವಂತೆಯೂ ಆದೇಶ ನೀಡಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ರೈತ ಸಂಘಟನೆಗಳ ಮುಖಂಡರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯಬೇಕೆಂದು ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿಎಸ್‍ವೈ, ರಾಜ್ಯದ ಯಾವ ಯಾವ ಭಾಗಗಳಲ್ಲಿ ರೈತರ ಮೇಲೆ ಮೊಕದ್ದಮೆಗಳನ್ನು ದಾಖಲಿಸಲಾಗಿದೆಯೋ ಅವುಗಳನ್ನು ತತ್‍ಕ್ಷಣವೇ ವಾಪಸ್ ಪಡೆಯಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.


ಒಂದು ಕಮೆಂಟನ್ನು ಬಿಡಿ

ಸಂಬಂಧಿತ ಟ್ಯಾಗ್ಗಳು

BS Yediyurappa BJP Farmers Karnataka Government