ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ, ಸಂಚಾರ ಸ್ಥಗಿತ !

Kannada News

13-06-2017

ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರ ಮಾದನಗೇರಿ ಗಟ್ಟದ ಬಳಿ ಹೆದ್ದಾರಿ ಅಗಲೀಕರಣಕ್ಕೆ ಕೊರೆದಿರುವ ಗುಡ್ಡ ಕುಸಿದು ಹೆದ್ದಾರಿಯ ಮೇಲೆ ಬಿದ್ದ ಕಾರಣ ಸುಮಾರು 2 ತಾಸಿಗು ಹೆಚ್ಚು ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡ ಘಟನೆ ನಡೆದಿದೆ. ಕಾರವಾರ ಮಾದನಗೇರಿ ಗಟ್ಟದಲ್ಲಿ ಹೆದ್ದಾರಿ ಅಗಲೀಕರಣಕ್ಕೆ ಗುತ್ತಿಗೆ ಪಡೆದಿರುವ  ಖಾಸಗಿ ಕಂಪನಿ, ಕೊರೆದಿರುವ ಗುಡ್ಡದಿಂದ ಮಣ್ಣು ಮತ್ತು ಕಲ್ಲುಗಳು ಕುಸಿತ ಆಗುತ್ತಿರುವುವ ಘಟನೆಗಳು ಆಗಾಗ ಸಂಭವಿಸುತ್ತಿದ್ದವು.ಈ ಕುರಿತು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದರು, ಆದರೂ ಯಾವುದೇ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ, ಮುನ್ನೇಚ್ಚರಿಕಾ ಕ್ರಮಗಳನ್ನೂ ವಹಿಸಿದೆ ನಿರ್ಲಿಪ್ತರಾಗಿದ್ದರು. ಇದರಿಂದ ಈಗ ಭಾರಿ ಅನಾಹುತ ಸಂಭವಿಸಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ