ಅಗೆದಿದ್ದ ಗುಂಡಿಗೆ ವ್ಯಕ್ತಿಯೋರ್ವ ಬಿದ್ದು ಗಂಭೀರ ಗಾಯ !

Kannada News

13-06-2017

ಗದಗ:- ಪೈಪ್ ಲೈನ್ ಕಾಮಗಾರಿ ವೇಳೆ ಅಗೆದಿದ್ದ ಗುಂಡಿಗೆ ವ್ಯಕ್ತಿಯೋರ್ವ ಬಿದ್ದು ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಗಜೇಂದ್ರಗಡದಲ್ಲಿ ನಡೆದಿದೆ. ಬಸವರಾಜ ಸಂಗಮದ ಗಾಯಗೊಂಡ ವ್ಯಕ್ತಿ. ಕಾಮಗಾರಿಯ ಕಾರಣ ಹಲವು ದಿನಗಳಿಂದ ಸ್ಥಳೀಯರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈಗ ಕಾಮಗಾರಿಗಾಗಿ ಅಗೆದಿದ್ದ ಗುಂಡಿಯಲ್ಲಿ ವ್ಯಕ್ತಿಯೊಬ್ಬರು ಬಿದ್ದಿರಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಕಾಮಗಾರಿ ಸರಿಪಡಿಸುವಂತೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ವಿಚಾರ ತಿಳಿದು ಘಟನಾ ಸ್ಥಳಕ್ಕಾಗಮಿಸಿದ ಪುರಸಭೆ ಮುಖ್ಯಾಧಿಕಾರಿ ಹನಮಂತಮ್ಮ ನಾಯಕ ಅವರಿಗೆ ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು, ಮತ್ತು ಕಾಮಗಾರಿಯನ್ನು ಬೇಗ ಪೂರ್ಣಗೊಳಿಸುವಂತೆ ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ