ಇನ್ನು ಚಪ್ಪಲಿ ಹಾಕಿಕೊಂಡು ಬೈಕ್ ಓಡಿಸಿದರೂ ಕಾದಿದೆ ದಂಡ!

Traffic rules violation

11-09-2019

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಯ  ದುಬಾರಿ ದಂಡದಿಂದ ಬೇಸ್ತು ಬಿದ್ದಿರುವ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಕಾದಿದ್ದು, ಇನ್ನುಮುಂದೆ ಚಪ್ಪಲಿ ಹಾಕಿಕೊಂಡು ವಾಹನ ಚಲಾಯಿಸದರೂ ದಂಡ ಗ್ಯಾರಂಟಿ ಎನ್ನಲಾಗುತ್ತಿದೆ.

ಈಗಾಗಲೇ ಜಾರಿಗೆ ಬಂದಿರುವ ಹೊಸ ಹೊಸ ಟ್ರಾಫಿಕ್ ನಿಯಮಗಳಿಂದ ವಾಹನ ಸವಾರರು ಆಘಾತಕ್ಕೊಳಗಾಗಿರುವ ಬೆನ್ನಲ್ಲೆ ಸ್ಲಿಪ್ಪರ್, ಹವಾಯಿ ಚಪ್ಪಲ್ ಹಾಕಿಕೊಂಡು ಗೇರ್ ಹೊಂದಿರುವ ದ್ವಿಚಕ್ರ ವಾಹನಗಳನ್ನು ಓಡಿಸುವಂತಿಲ್ಲ. ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿದರೆ 1,000 ರೂ ದಂಡ ತೆರಬೇಕಾಗಿರುತ್ತದೆ. ಈ ತಪ್ಪು ಮರುಕಳಿಸಿದರೆ ದಂಡದ ಜೊತೆಗೆ 15 ದಿನಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಸ್ಲಿಪ್ಪರ್, ಹವಾಯಿ ಚಪ್ಪಲಿ ಹಾಕಿದರೆ ದ್ವಿಚಕ್ರ ವಾಹನದ ಗೇರ್ ಬದಲಾಯಿಸಲು, ಪಾರ್ಕಿಂಗ್‍ನಿಂದ ವಾಹನ ತೆಗೆಯಲು ಸಮಸ್ಯೆ ಆಗಲಿದೆ. ಜೊತೆಗೆ ಅಪಘಾತವಾದಾಗ ಕಾಲಿಗೆ ಗಾಯವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಸವಾರರು ಶೂ ಧರಿಸಿದರೆ ಒಳ್ಳೆಯದು ಎಂಬುದು ನಿಯಮದ ಉದ್ದೇಶವಾಗಿದೆ. 1988ರ ಮೋಟಾರು ವಾಹನ ಕಾಯ್ದೆಯಲ್ಲೇ ಇದನ್ನು ಉಲ್ಲೇಖಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Traffic Rules Violation Bike riding Traffic Police


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ