ಸಿದ್ದರಾಮಯ್ಯಗೆ ಒಲಿಯುತ್ತಾ ಪ್ರತಿಪಕ್ಷದ ನಾಯಕ ಸ್ಥಾನ?

Siddaramaiah

14-09-2019

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ಮುಖಂಡರಲ್ಲಿ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಸ್ಥಾನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ದಕ್ಕಲಿದೆಯೇ ಎಂಬುದು ಯಕ್ಷಪ್ರಶ್ನೆಯಾಗಿ ಉಳಿದಿದೆ.

ಕಳೆದೆರಡು ದಿನಗಳಿಂದ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ ಅವರು, ವಿಪಕ್ಷ ನಾಯಕನ ಸ್ಥಾನಕ್ಕಾಗಿ ಲಾಬಿ ಮಾಡುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಇದಕ್ಕೆ ಒಪ್ಪುತ್ತಾರೆಯೇ, ಇಲ್ಲವೇ ಎಂಬುದೂ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಒಂದು ಮೂಲದ ಪ್ರಕಾರ, ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಸೋನಿಯಾ ಅವರಿಗೆ ಸುತರಾಂ ಆಸಕ್ತಿ ಇಲ್ಲ ಎನ್ನಲಾಗಿದೆ.

ಆದರೆ ಸಿದ್ದರಾಮಯ್ಯ ಅವರನ್ನೇ ವಿಪಕ್ಷ ನಾಯಕರನ್ನಾಗಿ ಮಾಡಬೇಕೆಂದು ಕೆಲವು ಹಿರಿಯ ನಾಯಕರು, ಸೋನಿಯಾ ಗಾಂಧಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಅವರು ಪಕ್ಷದ ಹಿರಿಯ ನಾಯಕರಾದ ಅಹ್ಮದ್ ಪಟೇಲ್, ಎ.ಕೆ. ಆಂಟನಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಮಾಡಿ, ತಮ್ಮನ್ನೇ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವಂತೆ ಮೇಡಂ ಸೋನಿಯಾ ಗಾಂಧಿ ಅವರ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

Congress Siddaramaih Sonia Gandhi KPCC


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ