ಪ್ರತಿ ಜಿಲ್ಲೆಗೆ ತೆರಳಿ ಪರಿಶೀಲನೆ : ಪ್ರಭು ಚವ್ಹಾಣ್

Prabhu Chavhan Statement

14-09-2019

ಬೆಂಗಳೂರು: ರಾಜ್ಯದಲ್ಲಿ ಪಶುಸಂಗೋಪನಾ ಇಲಾಖೆ ಎಷ್ಟರ ಮಟ್ಟಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ.  ಇಲಾಖೆಯ ಕಾರ್ಯಕ್ರಮಗಳು ರೈತರಿಗೆ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು.

ಪಶುಸಂಗೋಪನಾ ಇಲಾಖೆ ಅತ್ಯಂತ ಹಳೇ ಇಲಾಖೆ. ಈ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವುದು ಕಾರ್ಯನಿರ್ವಹಿಸುತ್ತಿರುವುದು ನನಗೆ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ಇಲಾಖೆಯಿಂದ ಅನುಷ್ಠಾನವಾಗಿರುವ ಪ್ರತಿಯೊಂದು ಯೋಜನೆಯ ಪರಿಶೀಲನೆ ನಡೆಸುತ್ತೇನೆ ಎಂದರು.

ಇಲಾಖೆಯಲ್ಲಿ ಹಲವರು ಹಿರಿಯರಿದ್ದೀರಿ, ನಿಮ್ಮ ಅನುಭವ ಬಳಸಿ ಜನರಿಗೆ ಅನುಕೂಲ ಮಾಡಿಕೊಡಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಶುಸಂಗೋಪನಾ ಇಲಾಖೆಯ ಸುಧಾರಣೆಗೆ ಸಲಹೆ-ಸೂಚನೆಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುವುದಾಗಿ ಅವರು ಸಭೆಯ ಆರಂಭದಲ್ಲಿ ಹೇಳಿದರು. ಪಶು ಸಂಗೋಪನಾ ಇಲಾಖೆ ರೈತರಿಗೆ ನೆರವು ನೀಡುವ ಮಹತ್ವದ ಇಲಾಖೆ. ಬದ್ಧತೆಯಿಂದ ಕೆಲಸ ಮಾಡುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿ ವಿ. ಲಕ್ಷ್ಮೀಮಹೇಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ಸಂಬಂಧಿತ ಟ್ಯಾಗ್ಗಳು

Prabhu Chavhan BJP Minister BS Yediyurappa


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ