ನೈಜೀರಿಯನ್ ಬಂಧನ – ಕಾರಣ ಎನ್ ಗೊತ್ತ?

Nigerian arrested

19-09-2019

ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ನೆಲೆಸಿ ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯನ್‌ನನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೆಣ್ಣೂರು ಬಂಡೆಯ ಭೈರವೇಶ್ವರ ಲೇಔಟ್‌ನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ನೈಜಿರಿಯಾದ ಅನ್ಬೇರಾ ರಾಜ್ಯದ ಎಕೆನೆ ಒಕ್ಕೊನ್ಕೋವಾ (೩೪)ನನ್ನು ಬಂಧಿಸಿ ೨೦ ಗ್ರಾಂ ಕೊಕ್ಕೇನ್ ಮೊಬೈಲ್ ಸೇರಿ ಒಂದು ಲಕ್ಷ ಎಪ್ಪತ್ತು ಸಾವಿರ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನೈಜೀರಿಯಾದಿಂದ ವ್ಯಾಪಾರಿ ವೀಸಾದಡಿ ಭಾರತಕ್ಕೆ ಬಂದಿದ್ದ ಆರೋಪಿಯು ವೀಸಾ ನಿಯಮವನ್ನು ಉಲ್ಲಂಘಿಸಿ ನಗರದ ವಿವಿಧೆಡೆ ಸುತ್ತಾಡುತ್ತಾ ಪರಿಚಿತ ಗ್ರಾಹಕರಿಗೆ ಮಾದಕ ವಸ್ತು ಕೊಕ್ಕೇನ್ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದ.
ವೀಸಾ ಅವಧಿ ಮುಗಿದ್ದರೂ ಆರೋಪಿಯು ನಗರದಲ್ಲೇ ಉಳಿದು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಆರೋಪಿಯ ಪಾಸ್ ಪೋರ್ಟ್ ವಶಪಡಿಸಿಕೊಂಡು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

crime Cocaine Nigeria Ganja


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ