ಅಲೋಕ್ ಕುಮಾರ್ ಸುದೀರ್ಘ ವಿಚಾರಣೆ

Alok Kumar

27-09-2019

ಬೆಂಗಳೂರು: ಟೆಲಿಪೋನ್ ಕದ್ದಾಲಿಕೆ ಪ್ರಕರಣದ ಸಂಬಂಧ ಶುಕ್ರವಾರ ಮತ್ತೆ ಕೆಎಸ್‌ಆರ್‌ಪಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ಅವರನ್ನು ಸುಧೀರ್ಘ ವಿಚಾರಣೆ ನಡೆಸಿ ಮಹತ್ವದ ಮಾಹಿತಿ ಸಂಗ್ರಹಿಸಿದ್ದಾರೆ.
ಜಾನ್ಸನ್ ಮಾರುಕಟ್ಟೆ ಬಳಿಯ ಮನೆಯಲ್ಲಿ ಕುಟುಂಬದವರಿಗೆ ನಿರ್ಬಂಧ ವಿಧಿಸಿ ಗುರುವಾರ ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೪ರವರೆಗೆ ಅಲೋಕ್ ಕುಮಾರ್ ಅವರನ್ನು ಸತತ ೬ ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಸಿಬಿಐ ಅಧಿಕಾರಿಗಳ ತಂಡವು ಶುಕ್ರವಾರ ಮತ್ತೆ ಕುಮಾರಕೃಪ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದೆ.
ಕುಮಾರಕೃಪ ಅತಿಥಿ ಗೃಹದಲ್ಲಿ ಮಧ್ಯಾಹ್ನ ೧೨ ರಿಂದ ಅಲೋಕ್‌ಕುಮಾರ್ ಅವರನ್ನು ಸಿಬಿಐನ ಡಿವೈಎಸ್ಪಿ ನೇತೃತ್ವದ ೬ ಮಂದಿ ಅಧಿಕಾರಿಗಳ ತಂಡ ವಿಚಾರಣೆಗೊಳಪಡಿಸಿ, ಮಾಹಿತಿ ಸಂಗ್ರಹಿಸ ತೊಡಗಿದೆ. ನಿನ್ನೆ ನಡೆದ ವಿಚಾರಣೆಯಲ್ಲಿ ಅಲೋಕ್ ಕುಮಾರ್ ಅವರು ಕೆಲವು ಪ್ರಶ್ನೆಗಳಿಗೆ ಜಾರಿಕೆ ಉತ್ತರ ನೀಡಿದ್ದು, ಅವುಗಳಿಗೆ ಸ್ಪಷ್ಟನೆಯನ್ನು ಅಧಿಕಾರಿಗಳು ಪಡೆದಿದ್ದಾರೆ.
ಪೋನ್ ಟ್ಯಾಪಿಂಗ್‌ಗೆ ಕೆಳ ಹಂತದ ಅಧಿಕಾರಿಗಳಿಗೆ ಸೂಚಿಸಿದ್ದು ನಿಜವೇ? ಯಾವ ಉದ್ದೇಶದಿಂದ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಸೇರಿದಂತೆ ಹಲವು ಪ್ರಶ್ನೆಗಳಿಗೆ ನಿನ್ನೆಯ ವಿಚಾರಣೆಯಲ್ಲಿ ಅಲೋಕ್ ಕುಮಾರ್ ಸರಿಯಾದ ಉತ್ತರ ನೀಡಿರಲಿಲ್ಲ, ಅಲ್ಲದೆ ಸಮರ್ಪಕ ಮಾಹಿತಿಯೂ ನೀಡರಲಿಲ್ಲ, ಅದಕ್ಕಾಗಿ ಅವರನ್ನು ಮತ್ತೆ ವಿಚಾರಣೆ ನಡೆಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
ನಗರದ ಪೊಲೀಸ್ ಆಯುಕ್ತರ ಅಧಿಕೃತ ನಿವಾಸದಲ್ಲಿ ಫೋನ್ ಕದ್ದಾಲಿಕೆ ನಡೆಸಿ ಆಡಿಯೋ ಮುದ್ರಣ ಮಾಡಿಕೊಂಡಿರುವ ಸುಮಾರು ೩೦ ಜಿಬಿಯಷ್ಟು ಧ್ವನಿಮುದ್ರಣದ ಪೆನ್ ಡ್ರೈವ್‌ಗೆ ಅಧಿಕಾರಿಗಳು ಅಲೋಕ್ ಕುಮಾರ್ ಅವರ ಮನೆಯಲ್ಲಿ ಹುಡುಕಾಟ ನಡೆಸಿದರಾದರೂ ಅದು ಪತ್ತೆಯಾಗಿಲ್ಲ ಇಂದಿನ ವಿಚಾರಣೆಯಲ್ಲಿ ಪೆನ್‌ಡ್ರೈವ್ ಎಲ್ಲಿದೆ ಎನ್ನುವುದರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ದೊಡ್ಡವರ ಸೂಚನೆಯಂತೆ ಅವರು ಕೊಟ್ಟಿದ್ದ ಫೋನ್ ನಂಬರ್‌ಗಳನ್ನು ಟ್ಯಾಪ್ ಮಾಡಿ ಕೆಳ ಅಧಿಕಾರಿಗಳಿಗೆ ತಲುಪಿಸಲಾಗಿದೆ. ನನಗೆ ವಾಟ್ಸಾಪ್‌ನಲ್ಲಿ ಸಂದೇಶ ನೀಡುತ್ತಿದ್ದರು. ಅದರಂತೆ ನಾನು ಮಾಡಿದ್ದೇನೆ. ಇದನ್ನು ಹೇಳಿಕೆಯಲ್ಲಿ ದಾಖಲಿಸಲಿದ್ದೇನೆ ಎಂದಿದ್ದು, ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ.
 


ಸಂಬಂಧಿತ ಟ್ಯಾಗ್ಗಳು

Alok Kumar CBI Phone tapping BJP


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ