ಯಡಿಯೂರಪ್ಪ ಅವರ ಮೇಲೆ ಸಿ ಐ ಡಿ ತನಿಖೆ ನಡೆಸುವಂತೆ ಪ್ರತಿಭಟನೆ !

Kannada News

13-06-2017

ಬೆಂಗಳೂರು:- ಬಿ ಎಸ್ ಯಡಿಯೂರಪ್ಪ ಅವರ ಮೇಲೆ ಸಿ ಐ ಡಿ ತನಿಖೆ ನಡೆಸುವಂತೆ ಜನಸಾಮಾನ್ಯರ ವೇದಿಕೆಯಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ, ಶಿವರಾಮ ಕಾರಂತ ಬಡಾವಣೆ 257 ಎಕರೆ ಜಮೀನು ಕೈಬಿಡುವ ಮೂಲಕ ಅಕ್ರಮ ಎಸಗಿದ್ದಾರೆಂದು ಆರೋಪ ಮಾಡಿದ್ದಾರೆ. ಶಿವರಾಮ ಕಾರಂತ ಬಡಾವಣೆಯ 257 ಕ್ಕೂ ಹೆಚ್ಚು ಎಕರೆ ಜಮೀನನ್ನು ಭೂಸ್ವಾಧೀನದಿಂದ ಬಿಡುವಂತೆ ಮಾಡಿದ ಅಕ್ರಮಕ್ಕೆ ಸಂಬಂಧಿಸಿದಂತೆ, ಬಿ ಎಸ್ ಯಡಿಯೂರಪ್ಪ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಬಿ ವಿ ಸದಾನಂದಗೌಡ ರವರು ಸದನಕ್ಕೆ ಕೊಟ್ಟ ಭರವಸೆಯಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜನ ಸಾಮಾನ್ಯರ ವೇದಿಕೆಯ ಅಡಿಯಲ್ಲಿ ಅನುಭವ ಮಂಟಪದ ಪರಿಕಲ್ಪನೆಯ ಅಡಿಯಲ್ಲಿ ವಿಶೇಷವಾಗಿ ನಗರದ ಮೌರ್ಯ ವೃತ್ತದ ಬಳಿ ಐದು ದಿನಗಳ ಅಹೋರಾತ್ರಿ ಪ್ರತಿಭಟನೆ ನೆಡೆಸುತ್ತಿದ್ದಾರೆ. ಪ್ರತಿಭಟನೆಯ ನೇತೃತ್ವವಹಿಸಿರುವ ಜನಸಾಮಾನ್ಯರ ವೇದಿಕೆಯ ಅಧ್ಯಕ್ಷ ಡಾ. ಅಯ್ಯಪ್ಪ ದೊರೆ ಮಾತನಾಡಿ, ರಾಜಕೀಯ ಭ್ರಷ್ಟಾಚಾರದ ಬಗ್ಗೆ ಈ ಅನುಭವ ಮಂಟಪದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಲಾಗುತ್ತಿದೆ.  ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ಎಸ್ ಯಡಿಯೂರಪ್ಪನವರು ಸಾವಿರಾರು ಕೋಟಿ ಬೆಲೆಬಾಳುವ ಭೂಮಿಯನ್ನು ಅಕ್ರಮ ಡಿ ನೋಟಿಫಿಕೇಷನ್ ಮಾಡಿ ಸರಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವ ಭೂ ಹಗರಣದ ಕುರಿತು ದಾಖಲೆಗಳನ್ನ ಬಿಡುಗಡೆ ಮಾಡಲು ನಾಳೆ ಮಧ್ಯಾಹ್ನ 12 ಗಂಟೆಗೆ ಮೌರ್ಯ ವೃತ್ತದ ಬಳಿ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಟಿಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ