ನಾಡಿದ್ದು ಮತ್ತೆ ಮಳೆ ಅಬ್ಬರ

Rain

04-11-2019

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಮಹಾ ಚಂಡಮಾರುತ ಚುರುಕಾಗಿದ್ದು, ಕೇರಳ, ಗುಜರಾತ್ ಸೇರಿದಂತೆ ಕರ್ನಾಟಕದ ಕೆಲ ಭಾಗಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಮತ್ತೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ, ನವೆಂಬರ್ 6ರಂದು ಗುಜರಾತ್, ಕೇರಳ, ತಮಿಳುನಾಡು ಸೇರಿದಂತೆ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ.
ಭಾರತೀಯ ಹವಾಮಾನ ಇಲಾಖೆ ಚಂಡಮಾರುತದಿಂದ ಭೂಕುಸಿತವಾಗುವ ಬಗ್ಗೆ ಯಾವುದೇ ನಿರ್ದಿಷ್ಟವಾದ ಸೂಚನೆ ನೀಡಿಲ್ಲ. ಕ್ಯಾರ್ ಚಂಡಮಾರುತದಿಂದಾಗಿ ಕಳೆದ ಕೆಲವು ದಿನಗಳಲ್ಲಿ ಗುಜರಾತ್‌ನ ಹಲವಾರು ಭಾಗಗಳಲ್ಲಿ ಭಾರಿ ಮಳೆಯಾಗಿತ್ತು. ಅದು ಈಗ ದುರ್ಬಲಗೊಂಡು ಒಮಾನ್ ಕಡೆಗೆ ಸಾಗಿದೆ ಎನ್ನಲಾಗಿದೆ. 

ಕೇರಳದ ಎರ್ನಾಕುಲಮ್, ತ್ರಿಶೂರ್, ಮಲಪ್ಪುರಂ ಹಾಗೂ ಕೋಳಿಕ್ಕೊಡ್‌ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಅಲ್ಲಿ 6 ಸೆಂ.ಮೀನಿಂದ 20 ಸೆಂ.ಮೀವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಉಳಿದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಜರಾತ್‌ನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಸಂಬಂಧಿತ ಟ್ಯಾಗ್ಗಳು

Rain Flood Karnataka Cyclone


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ