ಶಬರಿಮಲೆಗೆ ಮಹಿಳೆಯರ ಪ್ರವೇಶ – ನಾಳೆ ಸುಪ್ರೀಂ ತೀರ್ಪು

Shabarimala

13-11-2019

ಕೇರಳದ ಶಬರಿಮಲೆ ಐಯ್ಯಪ್ಪ ದೇಗುಲಕ್ಕೆ ಮಹಿಳೆಯರ ನಿಷೇಧ ಕುರಿತು ಸಲ್ಲಿಸಲಾಗಿರುವ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ನಾಳೆ ಪ್ರಕಟಿಸಲಿದೆ. 5 ರಿಂದ 50 ವರ್ಷದ ಮಹಿಳೆಯರು ದೇಗುವ ಪ್ರವೇಶಿಸಬಾರದು ಎಂಬ ನಿಯಮವನ್ನು ರದ್ದುಪಡಿಸಿ ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.

ಈ ತೀರ್ಪನ್ನು ಮರುಪರಿಶೀಲನೆಗೊಳಪಡಿಸಲು ಹಲವಾರು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಕುರಿತು ಸುದೀರ್ಘ ವಿಚಾರಣೆ ನಡೆದಿದ್ದು, ನಾಳೆ ಮುಖ್ಯ ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್, ನ್ಯಾಯಮೂರ್ತಿಗಳಾದ ರೋಹಿಂಟನ್ ನಾರಿಮನ್, ಡಿ.ವೈ ಚಂದ್ರಚೂಡ ಹಾಗೂ ಇಂದು ಮಲ್ಹೋತ್ರಾರನ್ನೊಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸಲಿದೆ.


ಸಂಬಂಧಿತ ಟ್ಯಾಗ್ಗಳು

Shabarimala Kerala Lord Ayyappa Supreme Court


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ