ರಾಹುಲ್ ಗಾಂಧಿಗೆ ಸುಪ್ರೀಂ ತರಾಟೆ

Rahul gandhi

15-11-2019

ರಾಹುಲ್ ಗಾಂಧಿ ಮಾತನಾಡುವಾಗ ಎಚ್ಚರದಿಂದಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಚೌಕಿದಾರ್ ಚೋರ್ ಹೈ ಎಂಬ ಹೇಳಿಕೆಯ ತಪ್ಪೊಪ್ಪಿಗೆ ಸ್ವೀಕರಿಸಿರುವ ಸುಪ್ರೀಂ ಕೋರ್ಟ್, ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಬೇಕು ಎಂದು ಹೇಳಿದೆ.

ಕಳೆದ ಬಾರಿ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಮೋದಿಯನ್ನು ಟೀಕಿಸುವ ಭರದಲ್ಲಿ ಚೌಕಿದಾರ್ ಚೋರ್ ಹೈ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದರು. ರಾಹುಲ್ ಗಾಂಧಿಯವರ ಈ ಹೇಳಿಕೆ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನಿಂದನಾ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿರುವ ನ್ಯಾಯಾಲಯ ರಾಹುಲ್ ಗಾಂಧಿಗೆ ಎಚ್ಚರಿಕೆಯಿಂದ ಮಾತನಾಡುವಂತೆ ಹೇಳಿದೆ.


ಸಂಬಂಧಿತ ಟ್ಯಾಗ್ಗಳು

Rahul Gandhi Supreme Court Congress Meenakshi Lekhi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ