ಡಿಕೆಶಿ ಗೆ ಬಿಗ್ ರಿಲೀಫ್

D K Shivkumar

15-11-2019

ಮತ್ತೆ ಬಂಧನ ಭೀತಿಯಲ್ಲಿದ್ದ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ. ಕೆ ಶಿವಕುಮಾರ್ ಗೆ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.

ಕಳೆದ ಅಕ್ಟೋಬರ್ ನಲ್ಲಿ ದೆಹಲಿ ಹೈಕೋರ್ಟ್ ಡಿಕೆಶಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ನೀಡುವಾಗ ಅಕ್ರಮ ಹಣ ವರ್ಗಾವಣೆಗೆ  ಕಾಯ್ದೆಯ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾಯಮೂರ್ತಿ ರೋಹಿಂಗ್ಟನ್ ನಾರಿಮನ್ ನೇತೃತ್ವದ ಪೀಠ ವಜಾಗೊಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕನಕಪುರ ಶಾಸಕ ಡಿಕೆಶಿ ಅವರನ್ನು ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್ ಅಧಿಕಾರಿಗಳು ಬಂಧಿಸಿದ್ದರು.


ಸಂಬಂಧಿತ ಟ್ಯಾಗ್ಗಳು

D K Shivkumar ED Arrest Kanakapura MLA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ