ನಾಲ್ಕು ಜನ ಕೊಲೆ ಆರೋಪಿಗಳ ಬಂಧನ !

Kannada News

13-06-2017

ಮುಳಬಾಗಿಲು:- ನಾಲ್ಕು ಮಂದಿ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಮುಳಬಾಗಿಲು ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲೆ‌ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಜಮೀನು ವಿವಾದ ಹಿನ್ನೆಲೆ, ಜೂನ್ 6 ರಂದು ಮುಳಬಾಗಿಲು ತಾಲ್ಲೂಕಿನ ಆವಣಿ ಗ್ರಾಮದ ನಿವಾಸಿ ನಾಗಭೂಷಣ್ ಎಂಬುವವರನ್ನು ಕೊಲೆ ಮಾಡಲಾಗಿತ್ತು. ಈ ಕುರಿತು ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಇದೇ ಗ್ರಾಮದ ಗೋಪಾಲ, ನಾರಾಯಣಸ್ವಾಮಿ, ಮುನಿವೆಂಕಟಪ್ಪ, ಸೂರಪ್ಪ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 6 ಮೊಬೈಲ್, ಎರಡು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಮತ್ತು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ