ಚುನಾವಣಾ ಕಣದಿಂದ ಹಿಂದೆ ಸರಿದ ‘ಬೇಗ್’

Roshan beig

18-11-2019

ಬೆಂಗಳೂರು: ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬಿಜೆಪಿ ಪಕ್ಷದಿಂದ ಟಿಕೆಟ್ ಕೈತಪ್ಪಿದ್ದರಿಂದ ಬೇಗ್ ಅವರು ಅತಂತ್ರರಾಗಿದ್ದರು. ಐಎಂಎ ಹಗರಣದಲ್ಲಿ ಬೇಗ್ ಹೆಸರು ತಳುಕುಹಾಕಿಕೊಂಡಿದ್ದರಿಂದ ಬಿಜೆಪಿ ಟಿಕೆಟ್ ನೀಡಿಲ್ಲ ಎನ್ನಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಶಿವಾಜಿನಗರ ಜನತೆಗೆ ಕೃತಜ್ಞತೆ ಸಲ್ಲಿಸಿರುವ ರೋಷನ್ ಬೇಗ್ ಐಎಂಎ ಪ್ರಕರಣದಿಂದ ಚುನಾವಣೆಯಲ್ಲಿ ಹಿನ್ನಡೆ ಆಗುವ ಆತಂಕದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದು, ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯುವ ತೀರ್ಮಾನವನ್ನು ಕೈಕೊಂಡಿದ್ದಾರೆ. ನಿನ್ನೆ ಅನರ್ಹ ಶಾಸಕ ರೋಷನ್ ಬೇಗ್ ಬೆಂಬಲಿಗರ ಸಭೆ ನಡೆಸಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ನಿಂದ ದೂರವಾಗಿ, ಬಿಜೆಪಿಗೆ ಬೇಡವಾಗಿ ಅತಂತ್ರ ಸ್ಥಿತಿಯಲ್ಲಿದ್ದ ರೋಷನ್ ಬೇಗ್ ಭಾನುವಾರ ಹಾಸನಕ್ಕೆ ತೆರಳಿ ಜೆಡಿಎಸ್ ನಾಯಕರ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದರು. ಆದರೆ ಜೆಡಿಎಸ್ ಟಿಕೆಟ್ ಸಿಗದಿದ್ದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದರು ಎನ್ನಲಾಗಿದೆ. ಆದರೆ ಅಂತಿಮ ಕ್ಷಣದಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಬಿಜೆಪಿ ಅಭ್ಯರ್ಥಿಗೆ ಗೆಲುವಿಗೆ ಬೆಂಬಲಿಸುವಂತೆ ಬಿಜೆಪಿ ವರಿಷ್ಠರು ಮನವೊಲಿಸಿದ್ದಾರೆ ಎನ್ನಲಾಗಿದೆ.
ಐಎಂಎ ಪ್ರಕರಣ,ರುದ್ರೇಶ್ ಹತ್ಯೆ ಪ್ರಕರಣಗಳು ಅವರಿಗೆ ಉರುಳಾಗಿರುವ ಹಿನ್ನೆಲೆ ರೋಷನ್ ಬೇಗ್ ಪ್ರಕರಣಗಳಿಂದ ಹೊರ ಬರಬರುವ ತನಕ ಯಾವುದೇ ರಾಜಕೀಯ ಪಕ್ಷಗಳು ಅವರನ್ನು ಹತ್ತಿರ ಸೇರಿಸಕೊಳ್ಳಲು ಹಿಂದೇಟು ಹಾಕಿವೆ. ರಾಜಕೀಯ ಭವಿಷ್ಯ ಹಾಗೂ ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ ಹಿನ್ನಲೆಯಲ್ಲಿ ಪಕ್ಷೇತರನಾಗಿ ಕಣಕ್ಕಿಳಿಯುವಂತೆ ಬೆಂಬಲಿಗರು ಒತ್ತಾಯಿಸಿದ್ದರು. ಆದರೆ ಇಂದು ಫೇಸ್ ಬುಕ್ ಪೇಜ್ ನಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿರುವುದಾಗಿ ಪ್ರಕಟಿಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬೆಂಬಲಿಗರು ಕಾರ್ಯಕರ್ತರು, ಅಭಿಮಾನಿಗಳಿಗೆ ರೋಷನ್ ಬೇಗ್ ವಂದನೆಗಳನ್ನು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Roshan Baig BJP Election Congress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ