ಕೇಂದ್ರ ಬಿಜೆಪಿಯಲ್ಲಿ ತಳಮಳ

Central government

24-12-2019

ಇಡೀ ದೇಶವನ್ನೇ ಹಿಡಿತದಲ್ಲಿಟ್ಟುಕೊಂಡಂತೆ ಹಾಗೂ ತಾನೇ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದ ಪ್ರಧಾನಿ ಮೋದಿ ನಡೆಯಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ಬಿಜೆಪಿಯಲ್ಲಿ ಮತ್ತೆ ತಳಮಳ ಆರಂಭವಾಗಿದೆ. ಜಾರ್ಖಂಡ್ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಇದೀಗ ಕೇಂದ್ರದಲ್ಲಿ ದೊಡ್ಡ ಮಟ್ಟದ ಸ್ಥಾನಗಳ ಬದಲಾವಣೆಯ ಗುಸುಗುಸು ಕೇಳಿಬರುತ್ತಿದೆ. ಹೌದು ಕೇಂದ್ರ ಬಿಜೆಪಿಯಲ್ಲಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಸ್ಥಾನಪಲ್ಲಟ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಕ್ಕೆ ಆರ್ ಎಸ್ ಎಸ್ ಕೂಡ ಒಲವು ತೋರಿದೆ ಎನ್ನಲಾಗಿದ್ದು, ಪಕ್ಷದ ರಾಷ್ಟ್ರಾಧ್ಯಕ್ಷರ ಸ್ಥಾನದಿಂದ ಹಿಡಿದು ಪ್ರಧಾನಮಂತ್ರಿ ಸ್ಥಾನದವರೆಗೂ ಬದಲಾವಣೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಈಗಾಗಲೇ ಪೌರತ್ವ ಕಾಯ್ದೆಯಿಂದ ದೇಶವ್ಯಾಪಿ ಪ್ರತಿಭಟನೆಯ ಬಿಸಿ ಅನುಭವಿಸುತ್ತಿರುವ ಬಿಜೆಪಿಯಲ್ಲೂ ಇದೀಗ ಅಸಮಾಧಾನದ ಹೊಗೆಯಾಡುತ್ತಿದೆ. ಇದರ ಪರಿಣಾಮವಾಗಿ ಕೇಂದ್ರದಲ್ಲಿ ಏನೇನು ಬದಲಾವಣೆಗಳಾಗುತ್ತವೆಯೋ .. ಕಾದು ನೋಡಬೇಕಿದೆ.


ಸಂಬಂಧಿತ ಟ್ಯಾಗ್ಗಳು

PM Modi Amit Shah BJP CAA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ