ಚೆಟ್ಟಳ್ಳಿಯಲ್ಲಿ ಕಂಕಣ ಸೂರ್ಯಗ್ರಹಣ

solar-eclipse

26-12-2019

ಇಂದು ಸೌರವ್ಯೂಹ ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಬೆಳಗ್ಗೆ 8ಗಂಟೆ 6 ನಿಮಿಷಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣವನ್ನು ದೇಶದ ಬಹುಭಾಗದಲ್ಲಿ ಜನರು ವೀಕ್ಷಿಸಿದ್ದಾರೆ. ಈ ಅಪರೂಪದ ಕಂಕಣ ಸೂರ್ಯಗ್ರಹಣವನ್ನು ವೀಕ್ಷಿಸಲು ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ವ್ಯವಸ್ಥೆಗಳನ್ನು ಮಾಡಲಾಗಿತ್ತು. ಸೋಲಾರ್‌ ಗಾಗಲ್ಸ್‌ಗಳು, ಟೆಲಿಸ್ಕೋಪ್‌ಗಳ ವ್ಯವಸ್ಥೆಗಳನ್ನು ಮಾಡಲಾಗಿದೆ.
ಇನ್ನು ಕೊಡಗಿನ ಚೆಟ್ಟಳ್ಳಿಯಲ್ಲಿ ಕಂಕಣ ಸೂರ್ಯಗ್ರಹಣ ಸಂಪೂರ್ಣವಾಗಿ ಗೋಚರಿಸಿದೆ. ಪುತ್ತರಿರ ಪಪ್ಪು ತಿಮ್ಮಯ ಸೂರ್ಯಗ್ರಹಣದ ಚಿತ್ರವನ್ನು ಸೂಪರ್ ಸುದ್ದಿಗೆ ಕಳುಹಿಸಿಕೊಟ್ಟಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Solar Eclipse Kodagu Sun


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ