ಅಪಾರ್ಟ್ ಮೆಂಟ್ ವಾಲಲು ನೈಜ ಕಾರಣ ಗೊತ್ತ?

Apartment

07-02-2020

ಬೆಂಗಳೂರು: ಹೆಬ್ಬಾಳದ ಕೆಂಪಾಪುರದಲ್ಲಿ ಕಳೆದ ಮಂಗಳವಾರ ಬೆಳಿಗ್ಗೆ ಏಕಾಎಕಿ ವಾಲಿ ಆತಂಕ ಸೃಷ್ಠಿಸಿದ್ದ ೪ ಮಹಡಿಗಳ ಕಟ್ಟಡವನ್ನು ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗದಂತೆ ಶುಕ್ರವಾರ ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ
ವಾಲಿದ್ದ ಕಟ್ಟಡ ಯಾವ ಕ್ಷಣದಲ್ಲಿ ಬೇಕಾದರೂ ಕುಸಿಯುವ ಆತಂಕದ ಹಿನ್ನಲೆಯಲ್ಲಿ ಕಟ್ಟಡದಲ್ಲಿದ್ದ ೩೦ ಮಂದಿ ಸೇರಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದವರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗದಂತೆ ತೆರವು ಮಾಡಲಾಗುತ್ತಿದೆ.
ಕಟ್ಟಡದ ಪಕ್ಕದಲ್ಲಿ ಪಾಯ ಅಗೆಯುತ್ತಿದ್ದುದರಿಂದ ವಾಲಿದ ಕಟ್ಟಡವು ರಾಹುಲ್ ಎಂಬುವವರಿಗೆ ಸೇರಿದಾಗಿದ್ದು, ಘಟನೆಗೆ ಕಾರಣವಾದ ಪಕ್ಕದ ನಿವೇಶನದ ಮಾಲೀಕ, ಗುತ್ತಿಗೆದಾರ ಮತ್ತು ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ
ಅಕ್ಕಪಕ್ಕದ ಕಟ್ಟಡಗಳಿಗೆ ಯಾವುದೇ ಹಾನಿ ಉಂಟಾಗದಂತೆ ವನ್ನು ನೆಲಸಮ ಮಾಡಲು ಬಿಬಿಎಂಪಿ ಅಧಿಕಾರಿಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ. ನಿನ್ನೆ ಟೆರೇಸ್ ಒಡೆಯಲು ಮುಂದಾಗಿದ್ದ ಅಧಿಕಾರಿಗಳು ಡ್ರಿಲ್ಲಿಂಗ್ ಮಷಿನ್ ಮೂಲಕ ತೆರವಿಗೆ ಪ್ರಯತ್ನಿಸಿದ್ದರು. ಈ ವೇಳೆ ಕಟ್ಟಡ ಮತ್ತೊಂದು ಕಡೆ ವಾಲಿತ್ತು. ಕೂಡಲೇ ಅಧಿಕಾರಿಗಳು ಸಿಬ್ಬಂದಿಯನ್ನು ಕೆಳಗಿಳಿಸಿದ್ದರು.
ಕಟ್ಟಡ ತೆರವು ಕಾರ್ಯಾಚರಣೆಯನ್ನು ಆರಂಭಿಸಿರುವ ಅಕ್ಕಪಕ್ಕದ ಕಟ್ಟಡಗಳ ೧೦೦ಕ್ಕೂ ಹೆಚ್ಚು ಜನರಿಗೆ ಉಳಿದುಕೊಳ್ಳಲು ಬೇರೆ ಕಡೆ ವ್ಯವಸ್ಥೆ ಕಲ್ಪಿಸಿದೆ. ಇನ್ನೂ ೪ರಿಂದ ೫ ದಿನಗಳ ಕಾಲ ಕಟ್ಟಡ ತೆರವು ಕಾರ್ಯಾಚರಣೆ ಮುಂದುವರೆಯಲಿದೆ.
೫ ವರ್ಷದ ಹಿಂದೆ ಕಟ್ಟಿದ್ದ ಈ ಕಟ್ಟಡದ ಸಮೀಪದಲ್ಲಿ ಹೊಸ ಕಟ್ಟಡ ನಿರ್ಮಾಣದ ಕಾಮಗಾರಿ ಆರಂಭವಾಗಿತ್ತು. ಅದಕ್ಕೆ ಪಾಯ ತೆಗೆದ ಪರಿಣಾಮ ಈ ಕಟ್ಟಡ ವಾಲಿದೆ. ನಿವೇಶನಕ್ಕೆ ಹೊಂದಿಕೊಂಡಿದ್ದ ಕಟ್ಟಡದ ಅಡಿಪಾಯಕ್ಕಿಂತ ಆಳವಾದ ಪಾಯ ತೋಡಿದ್ದರಿಂದ ನಿರ್ಮಾಣಗೊಂಡಿದ್ದ ಕಟ್ಟಡದ ಅಡಿಪಾಯ ಸಡಿಲವಾಗಿದೆ. ಪಕ್ಕದ ನಿವೇಶನ ಬಾಬು ಎಂಬುವವರಿಗೆ ಸೇರಿದ್ದಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Apartment BBMP Hebbala Bengaluru


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ