‘ಸಿದ್ಧಾಂತ ಶಿಖಾಮಣಿ’ ಬಿಡುಗಡೆ ಮಾಡಲಿರುವ ಮೋದಿ

Siddhanta Shikhamani release by Modi

15-02-2020

ವಾರಾಣಸಿ: ವೀರಶೈವ ಧರ್ಮಗ್ರಂಥವೆಂದೇ ಜನಜನಿತವಾಗಿರುವ ಅಪೂರ್ವ ಕೃತಿ ‘ಸಿದ್ಧಾಂತ ಶಿಖಾಮಣಿ’ಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಲ್ಲಿ ಭಾನುವಾರ (ಫೆ.16) ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪನವರೂ ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವುದು ವಿಶೇಷ.

‘ಸಿದ್ಧಾಂತ ಶಿಖಾಮಣಿ’ ಗ್ರಂಥವು 19 ಭಾಷೆಗಳಿಗೆ ಭಾಷಾಂತರಗೊಂಡಿದ್ದು, ವಾರಾಣಸಿಯಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿರುವ ಶ್ರೀ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವ ಸಮಾರಂಭದಲ್ಲಿ ಈ ಕೃತಿಯ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

Modi Siddhanta Shikhamani Yediyurappa Varanasi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ