ಜೂಜಾಟದಲ್ಲಿ ತೊಡಗಿದ್ದವರ ಬಂಧನ

Gamblers arrested

17-02-2020

ಬೆಂಗಳೂರು, ಫೆ. ೧೫: ಮಟ್ಕಾ ಜೂಜಾಟದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಯಶವಂತಪುರದ ಜಿಲಾನಿ ಸಿದ್ದಿಕ್‌ತಾಲು (೩೦), ನಂದಿನಿ ಲೇಔಟ್‌ನ ಪ್ರಕಾಶ್ (೩೫) ಬಂಧಿತ ಆರೋಪಿಗಳಾಗಿದ್ದು, ಅವರಿಂದ ೭೩,೫೦೦ ನಗದು, ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ
ಆರೋಪಿಗಳು ಆರ್‌ಎಂಸಿಯಾರ್ಡ್‌ನ ಗಣೇಶ ದೇವಾಲಯದ ಮುಂಭಾಗ ಫುಟ್‌ಬಾತ್‌ನಲ್ಲಿ ಸಾರ್ವಜನಿಕರಿಂದ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಬಾಂಬೆ ಕಲ್ಯಾಣ ಮಟ್ಕಾ ಜೂಜಾಟ ನಡೆಸುತ್ತಿದ್ದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ, ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.


ಬೆಟ್ಟಿಂಗ್ ದಂಧೆ:
ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಚಿಕ್ಕಪೇಟೆಯ ಆರ್‌ಟಿ ಸ್ಟ್ರೀಟ್‌ನ ರೋಷನ್ ಕುಮಾರ್(೪೦) ಬಂಧಿತ ಆರೋಪಿಯಾಗಿದ್ದು ಚಿಕ್ಕಪೇಟೆಯ ಡಿಕೆ ಲೇನ್‌ನ ಕವಿತಾ ಮ್ಯಾಚಿಂಗ್ ಸೆಂಟರ್ ಬಳಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದ ಖಚಿತ ಮಾಹಿತಿ ಆಧರಿಸಿ ಸದರಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ರೋಷನ್ ಮೊಬೈಲ್ ಮೂಲಕ ಹಣವನ್ನು ಕಟ್ಟಿಸಿಕೊಂಡು ಬೆಟ್ಟಿಂಗ್ ನಡೆಸುತ್ತಿದ್ದು ಆತನಿಂದ ೬೭.೫೦೦ ರೂ ನಗದು ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ .
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬೆಟ್ಟಿಂಗ್ ದಂಧೆಯಲ್ಲಿ ಯಾರೆಲ್ಲಾ ಆರೋಪಿ ರೋಷನ್‌ನೊಂದಿಗೆ ಭಾಗಿಯಗಿದ್ದರು ಎಂಬುದರ ಬಗ್ಗೆ ತನಿಖೆ ಮುಂದುವರಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Betting Gambling Matka Cricket betting


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ