ಅಂತರ್ಜಲ ವರ್ಧನೆಗೆ ಕ್ರಮ: ವಜುಭಾಯಿ ವಾಲಾ

Steps to increase ground water

17-02-2020

ಬೆಂಗಳೂರು, ಫೆ.17: ರಾಜ್ಯದಲ್ಲಿ ಹೆಚ್ಚುತ್ತಿರುವ ಬರಗಾಲವನ್ನು ತಗ್ಗಿಸಿ ಅಂತರ್ಜಲವನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಹೊಸ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ರಾಜ್ಯಪಾಲ ವಿ.ಆರ್.ವಾಲಾ ಘೋಷಿಸಿದರು.

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಂಯೋಜನೆಗೊಳಿಸಿ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಯೋಜನೆಯನ್ನು ಜಾರಿ ಮಾಡುವುದಾಗಿ ಪ್ರಕಟಿಸಿದರು.

ಬೆಂಗಳೂರು ನಗರದಲ್ಲಿ ಉತ್ಪತ್ತಿಯಾಗುವ ಒಳಚರಂಡಿ ನೀರನ್ನು ಸಂಸ್ಕರಿಸಿ ಬರಪೀಡಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆರೆಗಳಿಗೆ ತುಂಬಿಸಲಾಗುತ್ತದೆ. ಇದೇ ಮಾದರಿಯನ್ನು ಇತರ ಪ್ರಮುಖ ನಗರಗಳಿಗೆ ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

41 ತಾಲೂಕುಗಳಲ್ಲಿ ಅಂತರ್ಜಲ ನಿರ್ವಹಣೆ ಕಾರ್ಯವನ್ನು ಕೈಗೊಳ್ಳಲು ಅಟಲ್ ಭೂ ಜಲ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅನುದಾನಕ್ಕೆ ಪೂರಕವಾಗಿ ಹೆಚ್ಚುವರಿ ಅನುದಾನ ನೀಡುವ ಮೂಲಕ ರಾಜ್ಯವನ್ನು ಬರ ಮುಕ್ತ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Vajubhai Vala Ground Water Governor Krishi Sinchai


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ