ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಂಧನದ ಭೀತಿ !

Kannada News

13-06-2017

ಬೆಂಗಳೂರು: -ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬಂಧನದ ಭೀತಿ ಎದುರಾಗಿದೆ. ಜಂತಕಲ್ ಮೈನಿಂಗ್ ಪ್ರಕರಣದ ತನಿಖೆ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಮಂಗಳವಾರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಗೊಳಿಸಿರುವುದರಿಂದ ಕುಮಾರಸ್ವಾಮಿ ಅವರು ಬಂಧನದ ಭೀತಿ ಎದುರಿಸುವಂತಾಗಿದೆ. ಪ್ರಕರಣದಲ್ಲಿ ತನಿಖಾಧಿಕಾರಿಗಳಿಗೆ ಅಗತ್ಯ ವೆನಿಸಿದರೆ ಕುಮಾರಸ್ವಾಮಿ ಅವರನ್ನು ಬಂಧಿಸಬಹುದು ಬಂಧನದ ಭೀತಿಯಲ್ಲಿದ್ದ ಹೆಚ್.ಡಿ.ಕುಮಾರಸ್ವಾಮಿ ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಇಂದು  ಕೈಗೆತ್ತಿಕೊಂಡ ನ್ಯಾಯಾಯವು ಅರ್ಜಿಯನ್ನು ತಿರಸ್ಕರಿಸಿದೆ. ಕಳೆದ ಮೇ17ರಂದು ಕುಮಾರಸ್ವಾಮಿ ಅವರಿಗೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿತ್ತು ಇದೇ ಪ್ರಕರಣದಲ್ಲಿ ಜಂತಕಲ್ ಮೈನಿಂಗ್ ಸಂಸ್ಥೆಯಿಂದ 10 ಲಕ್ಷ ರೂ ಲಂಚ ಪಡೆದ ಆರೋಪದಲ್ಲಿ ಹಿರಿಯ ಐಎಎಸ್ ಅಧಿಕಾರಿ ಗಂಗರಾಂ ಬಡೇರಿಯಾ ಅವರನ್ನು ವಿಶೇಷ ತನಿಖಾ ದಳ(ಎಸ್‍ಐಟಿ)ಬಂಧಿಸಿ ವಿಚಾರಣೆಗೊಳಪಡಿಸುತ್ತಿದ್ದಂತೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಮಾರಸ್ವಾಮಿ ಅವರು ನೀರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ