ತೀರ್ಪು ಖಂಡಿಸಿ ಪ್ರತಿಭಟನೆ

Ugrappa pratibhatane

17-02-2020

ಬೆಂಗಳೂರು, ಫೆ. 17: ಮೀಸಲಾತಿ ಮೂಲಭೂತ ಹಕ್ಕು ಅಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಪ್ರದೇಶ ಕಾಂಗ್ರೆಸ್ ಸಮಿತಿ ಎಸ್‌ಸಿ, ಎಸ್ ಟಿ, ಹಿಂದುಳಿದ ವರ್ಗ ವಿಭಾಗದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಪುರಭವನದ ಮುಂಭಾಗ ಸೇರಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಮೀಸಲಾತಿ ತೀರ್ಪುನ್ನು ನ್ಯಾಯಾಲಯ ಮರುಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಉಗ್ರಪ್ಪ ಮಾತನಾಡಿ, ಸಾಮಾಜಿಕ ನ್ಯಾಯಕ್ಕೆ ಕೊಡಲಿ ಪೆಟ್ಟು ನೀಡಿರುವ ಈ ತೀರ್ಪು ಸಂವಿಧಾನ ಬಾಹಿರವಾಗಿದ್ದು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಆಡಳಿತವಿರುವ ಇನ್ನಿತರ ರಾಜ್ಯಗಳಲ್ಲಿ ಮನುವಾದಿಗಳು ಮೀಸಲಾತಿಗೆ ವಿರುದ್ಧವಾಗಿ ತೀರ್ಪು ಬರುವಂತೆ ಹುನ್ನಾರ ನಡೆಸಿದ್ದಾರೆ. ಇದು ಪ್ರಜಾತಂತ್ರ ವ್ಯವಸ್ಥೆ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಎಸ್‌ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರ ಅಗತ್ಯ ಬಿದ್ದರೆ, ಸಂವಿಧಾನದ ತಿದ್ದುಪಡಿಗೆ ಮುಂದಾಗಲಿ. ಮೀಸಲಾತಿ ಮೂಲಭೂತ ಹಕ್ಕು ಎಂದು ಪ್ರತಿಪಾದಿಸುವುದು ಅತ್ಯವಶ್ಯಕವಾಗಿದೆ. ಅಂಬೇಡ್ಕರ್, ಗಾಂಧಿವಾದದ ವಿರುದ್ಧವಾಗಿ ಮನುವಾದ ಮೇಳೈಸುತ್ತಿರುವುದು ವಿಷಾದನೀಯ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಎಲ್ಲಾ ಕಡೆ ಆಂದೋಲನ ನಡೆಸಲಿದೆ ಎಂದು ಉಗ್ರಪ್ಪ ಎಚ್ಚರಿಸಿದರು.


ಸಂಬಂಧಿತ ಟ್ಯಾಗ್ಗಳು

VS Ugrappa SC/ST Reservation Supreme Court


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ