ಕಾಲೇಜು ಸುಧಾರಣೆಯ ಅಗತ್ಯವಿದೆ: ಡಾ. ಅಶ್ವತ್ಥನಾರಾಯಣ

College Reform

17-02-2020

ಬೆಂಗಳೂರು, ಫೆ.17: ರಾಜ್ಯದ ಉನ್ನತ ಶಿಕ್ಷಣ ಕಾಲೇಜುಗಳನ್ನು ಸುಧಾರಣೆ ಮಾಡಿ ಅವುಗಳ ಗುಣಮಟ್ಟ ಹೆಚ್ಚಿಸಲು ಡಿಜಿಟಲ್ ವ್ಯವಸ್ಥೆ ಜಾರಿಯಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಅರಮನೆ ರಸ್ತೆಯ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಸಭಾಂಗಣದಲ್ಲಿ ಸೋಮವಾರ ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಏರ್ಪಡಿಸಿದ್ದ, ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪರಿಣಾಮಕಾರಿ ಆಡಳಿತ ಮತ್ತು ನಾಯಕತ್ವ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಗುಣಮಟ್ಟ ಹೆಚ್ಚಿಸದ ಹೊರತು ರಾಜ್ಯದ ಉನ್ನತ ಶಿಕ್ಷಣ ಕಾಲೇಜುಗಳ ಸುಧಾರಣೆ ಸಾಧ್ಯವಿಲ್ಲ ಎಂದರು.

ರಾಜ್ಯ ಸರ್ಕಾರದ ನಿವೃತ್ತ ಪ್ರಧಾನ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಮಾತನಾಡಿ, ವಿಶ್ವವಿದ್ಯಾಲಯಗಳು ಜ್ಞಾನ ವೃದ್ಧಿಸುವ ವೇದಿಕೆಗಳು. ಅಲ್ಲಿ ಕಾರ್ಯಗಳು ಉತ್ತಮ ಗುಣಮಟ್ಟದಲ್ಲಿ ಸಾಗಬೇಕಾದರೆ ಕುಲಪತಿಗಳು ಸಹೋದ್ಯೋಗಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿರಬೇಕು. ಆಗ ಆಡಳಿತಾತ್ಮಕ ಕೆಲಸಗಳು ಸುಲಲಿತವಾಗಿ ನಡೆಯುತ್ತವೆ ಎಂದು ನುಡಿದರು.

ದಕ್ಷಿಣ ಭಾರತೀಯ ಬ್ರಿಟಿಷ್ ಕೌನ್ಸಿಲ್ ನಿರ್ದೇಶಕ ಜಾನಕ ಪುಷ್ಪನಾಥನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಸಹಾಯವಾಗಲಿ ಎಂದು ಅನೇಕ ಸಹಾಯಧನವನ್ನು ನೀಡಲಾಗುತ್ತಿದೆ. ಜೊತೆಗೆ ಪಿಎಚ್‍ ಡಿ ಸಂಶೋಧಕರಿಗೆ ಉನ್ನತ ಮಟ್ಟದ ಸಹಾಯಧನ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರೋತ್ಸಾಹಧನ ನೀಡಲಾಗುವುದು ಹಾಗೂ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲಾಗುವುದು ಎಂದು ಭರವಸೆ ನೀಡಿದರು.


ಸಂಬಂಧಿತ ಟ್ಯಾಗ್ಗಳು

College reform Aswath Narayan Grant administrative work


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ