ಶಿಕ್ಷಕರ ಧರಣಿ

Teachers

18-02-2020

ಬೆಂಗಳೂರು, ಫೆ.18: ಪ್ರೌಢಶಾಲೆಗಳ ಶಿಕ್ಷಕರು ಹಾಗೂ ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಾತಿಯನ್ನು ಸಿಇಟಿ ಅಂಕಗಳ ಆಧಾರದ ಮೇಲೆ ಮಾಡಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಈಶಾನ್ಯ ವಲಯ ಶಿಕ್ಷಕರ ವೇದಿಕೆಯ ನೂರಾರು ಮಂದಿ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನ ಮೈದಾನದಲ್ಲಿ ಮಂಗಳವಾರ ಧರಣಿ ನಡೆಸಿದರು.

ಈಶಾನ್ಯ ವಲಯ ಶಿಕ್ಷಕರ ವೇದಿಕೆ ಅಧ್ಯಕ್ಷ ಎಂ.ಬಿ. ಅಂಬಲಗಿ ಮಾತನಾಡಿ, ಶಿಕ್ಷಕರ ನೇಮಕಕ್ಕೆ ಟಿಇಟಿ, ಸಿಇಟಿ, ಕೆಎಸ್‌ಇಟಿ ಮತ್ತು ಎನ್‌ಇಟಿ ಮುಂತಾದ ಪರೀಕ್ಷೆ ಬರೆಯುವ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಕೃಪಾಂಕ ನೀಡಬೇಕು. ಉನ್ನತ ಶಿಕ್ಷಣಕ್ಕಾಗಿ ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ನೇಮಕಾತಿಗೆ ನಡೆದ ಪರೀಕ್ಷೆಗೆ ಎಚ್.ಕೆ. ಮತ್ತು ನಾನ್ ಎಚ್.ಕೆ. ಪ್ರಶ್ನೆಪತ್ರಿಕೆ ಪ್ರಕಟಿಸಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪರೀಕ್ಷಾರ್ಥಿಗಳಿಗೆ ಸಮಾನ ನ್ಯಾಯ ಕೊಡಲು ಸಾಧ್ಯವಿಲ್ಲ. ಇಂಗ್ಲಿಷ್‍ ಪತ್ರಿಕೆಯಲ್ಲಿ ಪ್ರಶ್ನೆಗಳಿಗೆ ಇಂತಿಷ್ಟು ಅಂಕ ನಿಗದಿ ಪಡಿಸದಿರುವುದರಿಂದ ಸಾಕಷ್ಟು ಪ್ರಶ್ನೆಪತ್ರಿಕೆಗಳಲ್ಲಿ ಅನ್ಯಾಯವಾಗಿದೆ. ಈ ಅನ್ಯಾಯ ಸರಿಪಡಿಸುವ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತಾಡುವುದಿಲ್ಲ. ಆದರೆ, ಗುಣಮಟ್ಟದ ಶಿಕ್ಷಣದ ಬಗ್ಗೆ ಮಾತಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Strike Teacher Freedom Park Ambalagi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ