ಸಾರಿಗೆ ಸಿಬ್ಬಂದಿ ಮುಷ್ಕರ: ಸಂಚಾರ ವ್ಯತ್ಯಯ ಸಾಧ್ಯತೆ

KSRTC Strike

19-02-2020

ಬೆಂಗಳೂರು, ಫೆ.19: ಸಾರಿಗೆ ನಿಗಮಗಳ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಗುರುವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಯ ಎಲ್ಲಾ ನಿಗಮಗಳ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದರಿಂದ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯವಾಗುವ ಸಾಧ್ಯತೆಯಿದೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲೂ ಕೆಆರ್‍ಟಿಸಿ (ಹುಬ್ಬಳ್ಳಿ) ಹಾಗೂ ಎನ್‌ಇಕೆಆರ್‌ಟಿಸಿ (ಕಲಬುರಗಿ) ಸೇರಿ ನಿಗಮದ ನೌಕರರು ನಗರಕ್ಕೆ ಆಗಮಿಸಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಮುಷ್ಕರ ಹಮ್ಮಿಕೊಳ್ಳಲು ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳು ಮಾತ್ರ ನಿರ್ಧರಿಸಿದ್ದವು. ಆದರೆ ಈಗ ರಾಜ್ಯದ ಎಲ್ಲ ನಾಲ್ಕೂ ನಿಗಮಗಳು ಕೈಜೋಡಿಸಲಿದ್ದು, ಕೆಲಸಕ್ಕೆ ರಜೆ ಹಾಕಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಇತ್ತೀಚೆಗಷ್ಟೇ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದ್ದರು. ಕೆಲಸಕ್ಕೆ ರಜೆ ಹಾಕದೆ ಪಾಳಿಯಂತೆ ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ.


ಸಂಬಂಧಿತ ಟ್ಯಾಗ್ಗಳು

KSRTC Strike No Buses Fulfil demand


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ