ಬಡ್ತಿ ಮೀಸಲಾತಿಗೆ ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತರಬೇಕು !

Kannada News

13-06-2017

ಬೆಂಗಳೂರು:- ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿಗೆ ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿ ದಲಿತ ಸೇನೆಯು ಗುರುವಾರ ಬನ್ನಪ್ಪ ಪಾರ್ಕ್‍ನಲ್ಲಿ ರಾಜ್ಯಮಟ್ಟದ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ. ಬಡ್ತಿ ಮೀಸಲಾತಿ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿರುವುದರಿಂದ ದಲಿತ ನೌಕರರಿಗೆ ಅನ್ಯಾಯವಾಗಲಿದೆ. ಇದು ದಲಿತ ನೌಕರರ ಹಿತಾಸಕ್ತಿಗೆ ವಿರುದ್ಧವಾದ ತೀರ್ಪಾಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ತಂದು ಸಂವಿಧಾನ ತಿದ್ದುಪಡಿ ಮಾಡಬೇಕು ಎಂದು ಅವರು ಸೇನೆಯ ರಾಜ್ಯಾಧ್ಯಕ್ಷ ಎಂ.ಎಸ್. ಜಗನ್ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 15ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮುಖಂಡರಾದ ಹನುಮಂತ ಹಲಸಂಗಿ, ರಾಜಶೇಖರ್ ಚೌರ್, ಪೀರಪ್ಪ ರ್ಯಾವನೂರು, ಜಿ.ವೆಂಕಟೇಶ್, ಎನ್. ವೆಂಕಟೇಶ್, ವಿಜಯಕುಮಾರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ