ರೈತರಿಗೆ ದೀರ್ಘಾವಧಿ ಸಾಲ: ನಾರಾಯಣಗೌಡ

Loan to Farmers

19-02-2020

ಬೆಂಗಳೂರು, ಫೆ.19: ತೋಟಗಾರಿಕೆಯನ್ನೇ ನಂಬಿರುವ ರೈತರಿಗೆ ಶಕ್ತಿ ತುಂಬಲು 25 ಕೋಟಿರೂ ದೀರ್ಘಾವಧಿ ಸಾಲ ಸೌಲಭ್ಯ ನೀಡುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಪೌರಾಡಳಿತ, ತೋಟಗಾರಿಕೆ ಸಚಿವ ನಾರಾಯಣಗೌಡ ಅವರು ತಿಳಿಸಿದ್ದಾರೆ.

ನಗರದ ಲಾಲ್‌ಬಾಗ್‌ನಲ್ಲಿ ಬುಧವಾರ ಹಾಪ್‌ಕಾಮ್ಸ್ ಆಯೋಜಿಸಿದ್ದ ದ್ರಾಕ್ಷಿ ಮತ್ತು ಕಲ್ಲಂಗಡಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುಮಾರು ೧೯೮ ಹಾಪ್‌ಕಾಮ್ಸ್ ಮಳಿಗೆಗಳು ಕಾರ್ಯ ನಿರ್ವಹಿಸುತ್ತಿವೆ. ರೈತರ ಬೆನ್ನೆಲುಬಾದ ಹಾಪ್‌ಕಾಮ್ಸ್ ಗ್ರಾಹಕರಿಗೆ ಗುಣಮಟ್ಟದ ವಿವಿಧ ತಳಿಯ ಹಣ್ಣುಗಳು, ತರಕಾರಿಗಳನ್ನು ಸಬ್ಸಿಡಿ ದರದಲ್ಲಿ ಮಾರಾಟ ಮಾಡುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಹೇಳಿದರು.

ಹಾಪ್‌ಕಾಮ್ಸ್‍ ವತಿಯಿಂದ ಪಂಚತಾರಾ ಹೋಟೆಲ್ ಸೇರಿದಂತೆ ಇನ್ನಿತರ ಉತ್ತಮ ಶ್ರೇಣಿಯ ಹೋಟೆಲ್‌ಗಳಿಗೆ ತರಕಾರಿ, ಹಣ್ಣು ಸರಬರಾಜು ಮಾಡುವ ಸಂಬಂಧ ಶೀಘ್ರದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ದುಸ್ಥಿತಿಯಲ್ಲಿರುವ ಹಲವು ಹಾಪ್‌ಕಾಮ್ಸ್ ಮಳಿಗೆಗಳನ್ನು ಸುಧಾರಣೆಗೊಳಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Hopcoms Narayana Gowda Farmers Loan


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ