ಅನಾರೋಗ್ಯದಿಂದ ಬಳಲುತ್ತಿರುವ ನಟ ವೆಂಕಟೇಶ್

Killer Venkatesh in distress

19-02-2020

ಬೆಂಗಳೂರು,ಫೆ.19: ಲಿವರ್ ವೈಫಲ್ಯದಿಂದ ಬಳಲುತ್ತಿರುವ ಹಿರಿಯ ನಟ ಕಿಲ್ಲರ್ ವೆಂಕಟೇಶ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಇತ್ತೀಚೆಗೆ ನಡೆದ ಚಂದನವನ ಅವಾರ್ಡ್ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಅವರು ಹೆಸರು ಪ್ರಸ್ತಾಪಿಸದೇ, “ಹಿರಿಯ ಕಲಾವಿದರೊಬ್ಬರು ಒಂದು ದಿನದ ಜೀವನಕ್ಕೂ ಸಂಕಷ್ಟ ಅನುಭವಿಸುತ್ತಿದ್ದಾರೆ” ಎಂದು ಮಾಧ್ಯಮದವರ ಮುಂದೆ ಹೇಳಿದ್ದರು. ನೂರಾರು ಚಿತ್ರಗಳಲ್ಲಿ ನಟಿಸಿ ಕಲಾಸೇವೆ ಮಾಡಿರುವ ಹಲವು ಕಲಾವಿದರ ಬದುಕು ಈಗ ಸಂಕಷ್ಟದ ಕುಲುಮೆಯಲ್ಲಿ ಬೇಯುತ್ತಿದೆ ಎಂದು ನೋವು ತೋಡಿಕೊಂಡಿದ್ದರು.

ಈಗ ಟ್ವಿಟರ್‌ನಲ್ಲಿ ವೆಂಕಟೇಶ್ ಅವರ ಸ್ಥಿತಿಯ ಬಗ್ಗೆ ಜಗ್ಗೇಶ್ ಮಾಹಿತಿ ಹಂಚಿಕೊಂಡಿದ್ದಾರೆ. “ಕಿಲ್ಲರ್ ವೆಂಕಟೇಶ್ ಇಂದು ಲಿವರ್ ವೈಫಲ್ಯದಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಇವರ ವಿಷಯವನ್ನೇ ನಾನು ಚಂದನವನ ಅವಾರ್ಡ್ ವೇದಿಕೆಯಲ್ಲಿ ಮಾತಾಡಿದ್ದು. ನನ್ನ ಕೈಲಾದ ಸಹಾಯ ಮಾಡಿ ಇವನನ್ನು ಉಳಿಸಿಕೊಳ್ಳಲು ಯತ್ನಿಸುತ್ತಿರುವೆ. ಹಿರಿಯ ಕಲಾವಿದರ ಸ್ಥಿತಿ ಕಂಡು ತುಂಬಾ ದುಃಖವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

250ಕ್ಕೂ ಹೆಚ್ಚಿನ ಕನ್ನಡ ಸಿನಿಮಾಗಳಲ್ಲಿ ಕಿಲ್ಲರ್ ವೆಂಕಟೇಶ್ ನಟಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Killer Venkatesh Jaggesh Victoria Hospital Liver Failure


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ