ಅಮಿತ್ ಶಾ ವಿರುದ್ಧ ಸಿದ್ದು ಟ್ವೀಟ್

Siddaramaiah tweets against Amit Shah

25-02-2020

ಬೆಂಗಳೂರು, ಫೆಬ್ರವರಿ 25: ಈಶಾನ್ಯ ದೆಹಲಿಯಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧವಿರುವ ಹೋರಾಟಗಾರರ ನಡುವೆ ಭಾನುವಾರ ಸಂಜೆಯಿಂದ ಘರ್ಷಣೆ ನಡೆಯುತ್ತಿದ್ದು, ಪೊಲೀಸರು ಸೇರಿದಂತೆ 7 ಮಂದಿ ಇದುವರೆಗೂ ಘರ್ಷಣೆಯಲ್ಲಿ ಮೃತಪಟ್ಟಿದ್ದಾರೆ.

ಈ ಮಾಹಿತಿಯ ಹಿನ್ನೆಲೆಯಲ್ಲಿ #DelhiViolence ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಏಳು ಜೀವಗಳನ್ನು ಬಲಿತೆಗೆದುಕೊಂಡ ದೆಹಲಿ ಗಲಭೆ ಅತ್ಯಂತ ಖೇದಕರವಾದರೂ ಅನಿರೀಕ್ಷಿತವೇನಲ್ಲ. ಬಿಜೆಪಿಯ ಸಚಿವರು, ಶಾಸಕರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾಗಲೂ 'ಸರ್ವಶಕ್ತ' ಗೃಹಸಚಿವ ಅಮಿತ್ ಶಾ ಅವರು ಕಣ್ಣುಮುಚ್ಚಿ ಕೂತಿರುವುದೇ ಈ ಗಲಭೆಗೆ ಕಾರಣ" ಎಂದು ಟೀಕಿಸಿದ್ದಾರೆ.

ದೆಹಲಿಯಲ್ಲಿ ಹಿಂಸಾಚಾರಕ್ಕೆ ಬಹಿರಂಗವಾಗಿ ಪ್ರಚೋದನೆ ನೀಡಿರುವ ಬಿಜೆಪಿ ನಾಯಕ ಕಪಿಲ್‍ ಮಿಶ್ರಾ ಅವರನ್ನು ಬಂಧಿಸಬೇಕು. ಗಲಭೆಗ್ರಸ್ತ ಪ್ರದೇಶಕ್ಕೆ ಅವಶ್ಯಕ ಪ್ರಮಾಣದಲ್ಲಿ ಪೊಲೀಸರನ್ನು ನೇಮಿಸಿ ಭೀತಿಗ್ರಸ್ತ ಜನರಲ್ಲಿ ವಿಶ್ವಾಸ ತುಂಬಬೇಕು ಎಂದು ಕೂಡ ಅವರು ಟ್ವಿಟರ್‍ ಮಾಧ್ಯಮದ ಮೂಲಕ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Siddaramaiah Delhi Violence Amith Shaw CAA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ