ಎಟಿಎಂ ಕಳ್ಳರ ಬಂಧನ

ATM thieves arrested

25-02-2020

ಬೆಂಗಳೂರು, ಫೆ.25: ಸೆಕ್ಯೂರಿಟಿ ಗಾರ್ಡ್‌ಗಳಿಲ್ಲದ ಎಟಿಂಎ ಕೇಂದ್ರಗಳನ್ನು ಗುರಿಯಾಗಿಸಿಕೊಂಢು ಸ್ಕಿಮ್ಮಿಂಗ್ ಯಂತ್ರ ಅಳವಡಿಸಿ ಎಟಿಎಂ ಕಾರ್ಡ್‌ಗಳ ಮಾಹಿತಿ ಪಡೆದು ನಕಲಿ ಕಾರ್ಡ್ ಮೂಲಕ ಹಣ ದೋಚುತ್ತಿದ್ದ ಇಬ್ಬರು ತಾಂಜೇನಿಯಾ ವಿದ್ಯಾರ್ಥಿಗಳನ್ನು ರಾಮನಗರ ಜಿಲ್ಲೆಯ ಕುದೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಾದ ಅಲೆಕ್ಸ್ ಮೆಂಡ್ರಾಡ್ ಮ್ಸೆಕೆ, ಜಾರ್ಜ್ ಜೆನೆಸ್ ಅಸ್ಸೆಯ್ ಇವರಿಂದ 1 ಕಾರು, 2 ಬೈಕ್, 1 ಲ್ಯಾಪ್ ಟಾಪ್, 4 ಮೊಬೈಲ್‌ಗಳು, ನಕಲಿ ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಅನೂಪ್‌ಶೆಟ್ಟಿ ತಿಳಿಸಿದ್ದಾರೆ.

ಅಲೆಕ್ಸ್ ಮೆಂಡ್ರಾಡ್ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದು, ಯಲಹಂಕದ ಫ್ಲಾಟ್‌ವೊಂದರಲ್ಲಿ ವಾಸವಿದ್ದರೆ, ಮತ್ತೊಬ್ಬ ಆರೋಪಿ ಜಾರ್ಜ್ ಕುಮಾರಸ್ವಾಮಿ ಲೇಔಟ್‌ನ ರಾಜ್ಯೋತ್ಸವ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

ATM Skimmer Thieves Arrest


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ