ಹೋಟೆಲ್‌ಗೆ ಬೆಂಕಿ

Hotel in Fire

25-02-2020

ಬೆಂಗಳೂರು, ಫೆ. 25: ಜಯನಗರ ಬಳಿಯ ಸೌತ್ ಎಂಡ್ ಸರ್ಕಲ್ ಮೆಟ್ರೋ ನಿಲ್ದಾಣಕ್ಕೆ ಹೊಂದಿಕೊಂಡಿರುವ ಹೋಟೆಲ್‌ವೊಂದರಲ್ಲಿ ಮಂಗಳವಾರ ಬೆಳಿಗ್ಗೆ ಅಕಸ್ಮಿಕ ಬೆಂಕಿ ತಗುಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು

ಆರ್.ವಿ ರಸ್ತೆಯಲ್ಲಿರುವ ನ್ಯೂ ಶಾಂತಿ ಸಾಗರ ಹೋಟೆಲ್‌ನ ಎರಡನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹೋಟೆಲ್ ಮೆಟ್ರೋ ನಿಲ್ದಾಣಕ್ಕೆ ಹೊಂದಿಕೊಂಡಂತಿದ್ದು ಒಂದು ವೇಳೆ ಬೆಂಕಿ ಕೆನ್ನಾಲಿಗೆ ಚಾಚಿದ್ದರೆ ಹೆಚ್ಚಿನ ಅವಘಡ ಸಂಭವಿಸುವ ಸಾಧ್ಯತೆಯಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ ಬೆಂಕಿಯಿಂದ ಹೋಟೆಲ್‌ನ ಎರಡನೇ ಮಹಡಿಯ ಅಡುಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Fire accident Metro New Shanti sagar Fire extinguisher


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ