ದೇಶದ್ರೋಹಿಗಳಿಗೆ ಕ್ಷಮೆಯಿಲ್ಲ: ಅಶ್ವಥ್ ನಾರಾಯಣ

No excuse for traitors

26-02-2020

ಬಳ್ಳಾರಿ, ಫೆ.26: ಅಮೆರಿಕ ಅಧ್ಯಕ್ಷ ಡೋನಲ್ಡ್‍ ಟ್ರಂಪ್‍ ಬಂದಿದ್ದ ಸಂದರ್ಭವನ್ನು ಬಳಸಿಕೊಂಡು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿಚಾರದಲ್ಲಿ ಗೊಂದಲ ಸೃಷ್ಟಿಸಿದವರನ್ನು ಕ್ಷಮಿಸುವ ಮಾತೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್‍ ಹೇಳಿದ್ದಾರೆ.

ಬಳ್ಳಾರಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, “ವಿದ್ಯಾರ್ಥಿಗಳು ದೇಶದ್ರೋಹದಂಥ ಕೆಲಸಕ್ಕೆ ಮುಂದಾಗಬಾರದು. ಸಿಎಎ ವಿಷಯದಲ್ಲಿ ವಿದ್ಯಾರ್ಥಿಗಳು ಕಾಲೇಜು ಆವರಣದ ಹೊರಗೆ ವಿಚಾರ ವಿನಿಮಯ ಮಾಡಿಕೊಳ್ಳಲಿ. ಸಿಎಎ ಕಾಯ್ದೆ ಈಗಾಗಲೇ ಸಂಸತ್ತಿನಲ್ಲಿ ಅಂಗೀಕೃತವಾಗಿದೆ” ಎಂದು ತಿಳಿಸಿದರು.

ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ವಿಚಾರ ವಿನಿಮಯದ ಹಕ್ಕು ಎಲ್ಲರಿಗೂ ಇದೆ; ಆದರೆ ಯಾರೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Deputy CM Asw Donald Trump CAA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ