‘ರೈತನಾಯಕ’ನಿಗಿಂದು ಜನುಮದಿನ

Yediyurppa celebrates 78th Birthday

27-02-2020

ಬೆಂಗಳೂರು, ಫೆ.27: ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪ ಅವರಿಗಿಂದು ಜನ್ಮದಿನದ ಸಂಭ್ರಮ-ಸಡಗರ. 78ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ‘ಬಿ.ಎಸ್.ವೈ’ ಅವರಿಗೆ ಅಭಿಮಾನಿಗಳು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶುಭಕೋರಿದ್ದಾರೆ.

ಹುಟ್ಟುಹಬ್ಬದ ಶುಭಾಶಯ ಹೇಳಿದವರಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಗೋಪಾಲಯ್ಯ, ಸಂಸದರಾದ ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್‍, ಪಿ.ಸಿ. ಗದ್ದಿಗೌಡರ್‍, ಶಾಸಕ ಸಿದ್ದು ಸವದಿ ಸೇರಿದ್ದರು.

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಯಡಿಯೂರಪ್ಪ ಅವರಿಗೆ ಟ್ವಿಟರ್‍ ಮಾಧ್ಯಮದಲ್ಲಿ ಶುಭಾಶಯ ತಿಳಿಸಿದ್ದಾರೆ. “ಕರ್ನಾಟಕದ ಶ್ರಮಜೀವಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ರಾಜ್ಯದ ಪ್ರಗತಿಗಾಗಿ, ಅದರಲ್ಲೂ ವಿಶೇಷವಾಗಿ ಕೃಷಿಕರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ಅತ್ಯುತ್ಸಾಹದಿಂದ ಕೆಲಸ ಮಾಡುತ್ತಿರುವಂಥ ವ್ಯಕ್ತಿ. ಭಗವಂತ ಅವರಿಗೆ ದೀರ್ಘಾಯಸ್ಸು ಹಾಗೂ ಆರೋಗ್ಯ ನೀಡಲಿ” ಎಂದು ಮೋದಿ ಟ್ವಿಟರ್‍ ಮೂಲಕ ಹಾರೈಸಿದ್ದಾರೆ.

ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು (ಫೆ.27) ಸಂಜೆ 6 ಗಂಟೆಗೆ ‘ದಣಿವರಿಯದ ಧೀಮಂತ’ ಎಂಬ ಅಭಿನಂದನಾ ಸಮಾರಂಭ ನಡೆಯಲಿದ್ದು, ಕೇಂದ್ರ ಸಚಿವ ರಾಜನಾಥ್‍ ಸಿಂಗ್‍ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‍.ಎಂ. ಕೃಷ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‍.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದು ವಿಶೇಷ.


ಸಂಬಂಧಿತ ಟ್ಯಾಗ್ಗಳು

BS Yediyurappa Narendra Modi 78th Birthday Palace ground


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ