ಇನ್ಫೋಸಿಸ್ ಪ್ರತಿಷ್ಠಾನದ ಸಹಾಯಹಸ್ತ

Infosys Foundation helps to students

28-02-2020

ಬೆಂಗಳೂರು, ಫೆ.28: ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಕಂಪ್ಯೂಟರ್‍ ಪೂರೈಕೆ, ಗ್ರಂಥಾಲಯ ಸ್ಥಾಪನೆಗೆ ನೆರವು ಸೇರಿದಂತೆ ಶೈಕ್ಷಣಿಕ ವಲಯದ ಸುಧಾರಣೆಗೆ ಇನ್ಫೋಸಿಸ್‍ ಪ್ರತಿಷ್ಠಾನ ಮುಂದೆ ಬಂದಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‍. ಸುರೇಶ್‍ ಕುಮಾರ್‍ ಜತೆಗಿನ ಮಾತುಕತೆಯ ಸಂದರ್ಭದಲ್ಲಿ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಸರ್ಕಾರಿ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರ ವಿಶೇಷ ತರಬೇತಿಗೆಂದು 1 ಕೋಟಿ ರೂಪಾಯಿ ನೀಡಲು ಮತ್ತು ಅತ್ಯುತ್ತಮವಾಗಿ ಇಂಗ್ಲಿಷ್‍ ಬೋಧಿಸುವ ಶಿಕ್ಷಕರನ್ನು ಗುರುತಿಸಿ ಗೌರವಿಸಲು ಕೂಡ ಸುಧಾಮೂರ್ತಿ ಮುಂದೆ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಮಕ್ಕಳ ದಾಖಲಾತಿ ಹೆಚ್ಚಾಗಿರುವ ಶಾಲೆಗಳಿಗೆ ಪ್ರಥಮ ಆದ್ಯತೆ ನೀಡಲು ಮತ್ತು ಮೊದಲ ಹಂತದಲ್ಲಿ ಒಂದು ಸಾವಿರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕಂಪ್ಯೂಟರ್‍ಗಳನ್ನು ಪೂರೈಸಲು ಪ್ರತಿಷ್ಠಾನ ನಿರ್ಧರಿಸಿದೆ ಎನ್ನಲಾಗಿದೆ.


ಸಂಬಂಧಿತ ಟ್ಯಾಗ್ಗಳು

Sudha Murthy Computers to schools Infosys Foundation Govt Schools


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ