ಕೊರೋನಾ ಸೋಂಕು: ರಾಜ್ಯಾದ್ಯಂತ ಹೈ-ಅಲರ್ಟ್

Corona Virus attack

03-03-2020

ಬೆಂಗಳೂರು, ಮಾ.3: ಚೀನಾದಲ್ಲಿ ಶುರುವಾಗಿ ವಿಶ್ವದ ವಿವಿಧ ದೇಶಗಳಿಗೆ ತನ್ನ ಕಬಂಧಬಾಹು ಚಾಚಿರುವ ಕೊರೋನಾ ವೈರಸ್‍ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರವನ್ನು ಘೋಷಿಸಲಾಗಿದೆ.

ವಿದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದ್ದು, ಥಾಯ್ಲೆಂಡ್‍, ಮಲೇಷ್ಯಾ, ನೇಪಾಳ ಸೇರಿ 12 ದೇಶಗಳಿಂದ ಬರುತ್ತಿರುವ ವಿಮಾನಗಳನ್ನು ಕೂಲಂಕಷ ತಪಾಸಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ರಾಜೀವ್‍ ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿರುವುದು ಸೇರಿದಂತೆ ನಗರದ 10 ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ಕೊಠಡಿಗಳನ್ನು ರೂಪಿಸಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿದೇಶಗಳಿಂದ ಬರುವ ಪ್ರಯಾಣಿಕರ ಸ್ವಾಸ್ಥ್ಯದ ತಪಾಸಣೆ ನಡೆಯುತ್ತಿದೆ. ವಿದೇಶಿ ಪ್ರವಾಸಿಗರು ಹೆಚ್ಚಾಗಿ ಭೇಟಿನೀಡುವಂಥ ಪ್ರವಾಸಿ ತಾಣಗಳಲ್ಲೂ ಹೈ-ಅಲರ್ಟ್‍ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ.


ಸಂಬಂಧಿತ ಟ್ಯಾಗ್ಗಳು

Corona Virus Mangalore Airport International Airport Rajive Gandhi hospital


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ