ಪಿಯುಸಿ ಪರೀಕ್ಷೆಗೆ ಸಿದ್ಧತೆ

Preparation for PUC Exam

03-03-2020

ಬೆಂಗಳೂರು, ಮಾ.3: ದ್ವಿತೀಯ ಪದವಿ ಪೂರ್ವ (ಪಿಯುಸಿ) ಪರೀಕ್ಷೆಗಳು ಬುಧವಾರದಿಂದ ಆರಂಭವಾಗಲಿದ್ದು ಯಾವುದೇ ಅಕ್ರಮ-ಅಹಿತಕರ ಘಟನೆ ನಡೆಯದಂತೆ ಪರೀಕ್ಷೆಯನ್ನು ನಿರ್ವಹಿಸಲು ಪದವಿಪೂರ್ವ ಶಿಕ್ಷಣ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.

ಸುಮಾರು 7 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸಿ ಬಿಗಿ ಪೊಲೀಸ್ ಭದ್ರತೆಯನ್ನು ವ್ಯವಸ್ಥೆಗೊಳಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯಾದ್ಯಂತದ ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಎಂದು ವಿಂಗಡಿಸಲಾಗಿದ್ದು, ಅತಿ ಸೂಕ್ಷ್ಮ ಕೇಂದ್ರಗಳಲ್ಲಿ ವಿಶೇಷ ತನಿಖಾ ದಳಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಮಾ. 17ಕ್ಕೆ ಪರೀಕ್ಷೆಗಳು ಮುಗಿಯಲಿವೆ.


ಸಂಬಂಧಿತ ಟ್ಯಾಗ್ಗಳು

PUC Exam PUC Board 7 Lakh Students CCTV


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ