ಒಂದು ವಾರದೊಳಗೆ ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಧಿ ಘೋಷಣೆ ?

Kannada News

14-06-2017

ನವದೆಹಲಿ:- ಜನಾದೇಶ ಸರ್ಕಾರದ ಪರವಾಗಿದ್ದು, ರಾಷ್ಟ್ರಪತಿ ಚುನಾವಣೆ ಕೂಡ ಜನಾದೇಶದ ಮೂಲಕವೇ ನಡೆಯಲಿದೆ. ಇದನ್ನು ಅರಿತುಕೊಂಡು ಸರ್ಕಾರದೊಂದಿಗೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎನ್. ಡಿ.ಎ ವಿರೋಧ ಮಿತ್ರಪಕ್ಷಗಳ ಜತೆಗೆ ಸಮಿತಿಯ ಸದಸ್ಯರು ಸಮಾಲೋಚನೆ ನಡೆಸಲಿದ್ದು, ವಾರದೊಳಗೆ ಈ ಸಮಾಲೋಚನೆ ನಡೆಸಿದ ಬಳಿಕ ಬಿಜೆಪಿ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ ಎಂದರು. ಆಯ್ಕೆ ಪ್ರಕ್ರಿಯೆಗಳನ್ನು ಈಗಾಗಲೇ ನಾವು ಆರಂಭಿಸಿದ್ದೇವೆ. ಅಮಿತ್ ಶಾ ಹಾಗೂ ಜೇಟ್ಲಿಯವರೊಂದಿಗೆ ಮಾತುಕತೆ ನಡೆಸಲಾಗಿದೆ. ಪ್ರಸ್ತುತ ರಾಜನಾಥ ಸಿಂಗ್ ಅವರು ಮಿಜೋರಾಂನಲ್ಲಿದ್ದು, ಅವರೊಂದಿಗೂ ಸಮಾಲೋಚನೆ ನಡೆಸಿದ್ದೇವೆ. ಶೀಘ್ರದಲ್ಲಿಯೇ ಎಲ್ಲಾ ನಾಯಕರೊಂದಿಗೂ ಮಾತುಕತೆ ನಡೆಸಿ, ಇತರೆ ರಾಜಕೀಯ ಪಕ್ಷಗಳೊಂದಿಗೂ ಮಾತುಕತೆ ನಡೆಸುತ್ತೇವೆ. ಎಲ್ಲರ ಸಹಕಾರ, ಬೆಂಬಲವನ್ನು ಪಡೆಯುತ್ತೇವೆಂದು ನಾಯ್ಡು ಅವರು ತಿಳಿಸಿದ್ದಾರೆ. ನಾವು ಆಡಳಿತರೂಢ ಪಕ್ಷವಾಗಿದ್ದು, ನಮಗೆ ನಮ್ಮದೇ ಆದ ಜವಾಬ್ದಾರಿಗಳಿರುತ್ತವೆ. ಹೀಗಾಗಿ ಒಮ್ಮತದ ಮೂಲಕ ಆಯ್ಕೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಎಲ್ಲರ ಸಹಕಾರಕ್ಕಾಗಿ ಯತ್ನ ನಡೆಸುತ್ತಿದ್ದೇವೆಂದು ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ