ಸಭಾಪತಿ ಡಿ.ಹೆಚ್. ಶಂಕರಮೂರ್ತಿ ವಿಶ್ವಾಸ ಉಳಿಸಿಕೊಳ್ಳಲಿದ್ದಾರೆ !

Kannada News

14-06-2017

ಬೆಂಗಳೂರು:- ಅವಿಶ್ವಾಸ ನಿರ್ಣಯದ ಮೇಲಿನ ಮತದಾನದಲ್ಲಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ವಿಶ್ವಾಸ ಉಳಿಸಿಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಶಂಕರಮೂರ್ತಿಯವರು ಒಬ್ಬ ಸಜ್ಜನ, ಹಿರಿಯ ರಾಜಕಾರಣಿ. ಅವರು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂಥವರ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆ ಮಾಡಿರುವುದು ದುರದೃಷ್ಟಕರ ಎಂದರು. ಕಾಂಗ್ರೆಸ್ ಇಂಥ ಕೆಲಸಕ್ಕೆ ಕೈಹಾಕುತ್ತದೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಆದರೆ ಜೆಡಿಎಸ್ ಬಿಜೆಪಿಗೆ ಬೆಂಬಲ ಮುಂದುವರೆಸಿರುವ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹವಾಗಿದ್ದು, ಕಾಂಗ್ರೆಸ್‌ಗೆ ಈ ವಿಚಾರದಲ್ಲಿ ಸೋಲು ಖಚಿತ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ