ಖೈದಿಗಳ ಅಮರಣಾಂತ ಉಪವಾಸ ಸತ್ಯಾಗ್ರಹ !

Kannada News

14-06-2017

ಬೆಂಗಳೂರು:- ನಮ್ಮನ್ನು ಸನ್ನಡತೆಯ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಿ ಇಲ್ಲವೇ ದಯಾಮರಣಕ್ಕೆ ಅವಕಾಶ ಕೊಡಿ ಎಂದು ಒತ್ತಾಯಿಸಿ ಕೇಂದ್ರ ಕಾರಾಗೃಹದಲ್ಲಿರುವ 15 ಮಂದಿ ಖೈದಿಗಳು ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗೆ ಸಿದ್ದರಾಮಯ್ಯನವರಿಗೆ ನಾಲ್ಕು ಪುಟಗಳ ಪತ್ರ ಬರೆದಿರುವ ಖೈದಿಗಳು ಈ ಹಿಂದೆ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಿದಂತೆ ನಮ್ಮನ್ನು ಬಿಡುಗಡೆ ಮಾಡಬೇಕು. ಸರ್ಕಾರದಿಂದ ಇದು ಸಾಧ್ಯವಾಗದಿದ್ದರೆ ದಯಾಮರಣಕ್ಕಾದರೂ ಅವಕಾಶ ನೀಡಿ ಎಂದು ಕೋರಿದ್ದಾರೆ. ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಖೈದಿಗಳು ಸರ್ಕಾರದ ನಿರ್ಧಾರ ಪ್ರಕಟವಾಗುವವರೆಗೂ ನಮ್ಮ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಖೈದಿಗಳು ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತಿದ್ದಂತೆ, ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಂಧಿಖಾನೆ ಇಲಾಖೆಯ ಮಹಾನಿರ್ದೇಶಕರಾದ ಸತ್ಯನಾರಾಯಣ ರಾವ್ ಅವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ. ಖೈದಿಗಳನ್ನು ಸನ್ನಡತೆ ಮೇಲೆ ಬಿಡುಗಡೆ ಮಾಡುವ ಸಂಬಂಧ ಕಾನೂನು ತಜ್ಞರ ಜೊತೆ ಚರ್ಚಿಸಿ ವರದಿ ನೀಡಬೇಕೆಂದು ಗೃಹ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ